Sunday, 21st April 2024

ಲಾರಿ-ಕಾರು ಪರಸ್ಪರ ಡಿಕ್ಕಿ: ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ

ಸುಂಟಿಕೊಪ್ಪ: ಕೊಡಗು ಜಿಲ್ಲೆಯ ಕೆದಕಲ್ ಬಳಿ, ಲಾರಿ ಹಾಗೂ ಕಾರಿನ ನಡುವೆ ಗುರುವಾರ ಅಪಘಾತ ಸಂಭವಿಸಿ ಎರಡು ವಾಹನಗಳು ಹೊತ್ತಿ ಉರಿದಿವೆ. ಸಂಪೂರ್ಣ ಸುಟ್ಟು ಕರಕಲಾಗಿವೆ.

ಲಾರಿಯಲ್ಲಿ ಟೈಯರ್ ತುಂಬಿದ್ದರಿಂದ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ಕೊಂಡಿತು. ಮೂರು ಅಗ್ನಿ ಶಾಮಕ ದಳದ ವಾಹನಗಳಲ್ಲಿ ಬಂದ ಸಿಬ್ಬಂದಿ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಅವಘಡದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಸುಂಟಿಕೊಪ್ಪ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!