Saturday, 14th December 2024

ಸುಳ್ಳೇ ಬಿಜೆಪಿಯವರ ಮನೆ ದೇವರು

ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ: ಸಿಎಂ ಸಿದ್ದರಾಮಯ್ಯ

ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹ, ರಾಜ್ಯಕ್ಕೆ ಆಗುತ್ತಿರುವ ವಂಚನೆ ಸಮರ್ಥಿಸಿದ ಬಿಜೆಪಿ-ಜೆಡಿಎಸ್ ವಿರುದ್ಧ ಹರಿಹಾಯ್ದು ನಾಡಿನ ಜನತೆಯ ಪರ ಮುಖ್ಯಮಂತ್ರಿಗಳ ಭರ್ಜರಿ ಬ್ಯಾಟಿಂಗ್

ಬೆಂಗಳೂರು: ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, 1.40 ಸಾವಿರ ಕೋಟಿ ನಮ್ಮಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ ಹೋಗುತ್ತದೆ. 100 ರೂ.ತೆರಿಗೆ ಕೊಟ್ಟರೆ ನಮಗೆ 12 ರೂ.ಗಳು ಮಾತ್ರ ಕೇಂದ್ರದಿಂದ ತೆರಿಗೆ ಬರುತ್ತಿದೆ. ಇದನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಗೆ ನಾಚಿಕೆಯಾಗಬೇಕು ಎಂದರು.

ಕಾಳಜಿ ಇದೆಯೇ: 14 ನೇ ಹಣಕಾಸು ಆಯೋಗದಲ್ಲಿ 4.7 % ಹಾಗೂ 15 ನೇ ಹಣಕಾಸು ಆಯೋಗದಲ್ಲಿ 3.64 % ರಾಜ್ಯಕ್ಕೆ ನಿಗಡಿಯಾಗಿ ಶೇ 1.07% ರಷ್ಟು ಕಡಿಮೆಯಾಗಿದೆ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ 2 ನೇ ರಾಜ್ಯವಾಗಿರುವ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯವಾಗಿದೆ. ಕೇಂದ್ರದ ಅನ್ಯಾಯವನ್ನು ಬೆಂಬಲಿಸುವ ಬಿಜೆಪಿಗೆ ಕನ್ನಡಿಗರ ಬಗ್ಗೆ ಕಾಳಜಿ ಇದೆಯೇ ಎಂದರು.

ನರೇಂದ್ರ ಮೋದಿಯವರು ಗುಜರಾತ್ ಮುಖ್ಯ ಮಂತ್ರಿಯಾಗಿದ್ದಾಗ ಗುಜರಾತಿನಿಂದ ತೆರಿಗೆ ಸಂಗ್ರಹಿಸಿಸಬೇಡಿ ಎಂದಿದ್ದರು. ನಾವು ಆ ಮಾತು ಹೇಳಿಲ್ಲ.

ನಿಮ್ಮದು ನಿಶಕ್ತಿ: ಇದೇ ವೇಳೆಗೆ ಮೋದಿ ಮೋದಿ, ಜೈ ಶ್ರೀ ರಾಮ್ ಎಂದು ಕೂಗು ಹಾಕುತ್ತಿದ್ದ ವಿರೋಧಪಕ್ಷದವರನ್ನು ಉದ್ದೇಶಿಸಿ ನಿಮ್ಮದು ಕೇವಲ ನಿ:ಶಕ್ತಿ. ಮೋದಿ ಹೆಸರಿನ ಮೇಲೆ ನಡೆಸುತ್ತಿದ್ದೀರಿ.ಸಮಾಜ ಒಡೆಯುವ ಕೆಲ್ಸ ನಿಮ್ಮದು. ನಾವು ಜೈ ಸೀತಾ ರಾಮ್ ಎನ್ನುತ್ತೇವೆ ಎಂದು ಮುಖ್ಯ ಮಂತ್ರಿಗಳು ಘೋಷಣೆ ಕೂಗಿದರು. ಬಿಜೆಪಿ ಗೆ ತಲೆ ಖಾಲಿ, ಮೆದುಳು ಇಲ್ಲ. ರಾಮಾಯಾಣ ಮಹಾಭಾರತ ಓದಿಕೊಂಡೇ ಇಲ್ಲ ಎಂದು ತಿವಿದರು.