Friday, 13th December 2024

ಸಚಿವ ಮಧು ಬಂಗಾರಪ್ಪ ಕಾರು ಅಪಘಾತ

ತುಮಕೂರು: ಸೊರಬ ಕ್ಷೇತ್ರದ ಕಾಂಗ್ರೆಸ್ ಶಾಸಕ, ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಾರು ಅಪಘಾತವಾಗಿದೆ. ಸಚಿವರು ಅಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಮಧು ಬಂಗಾರಪ್ಪ ಕಾರು ಅಪಘಾತ ವಾಗಿದೆ.
ಮಧು ಬಂಗಾರಪ್ಪ ಸಚಿವ ಮಧು ಬಂಗಾರಪ್ಪ ಕಾರು ನಂದಿಹಳ್ಳಿ ಎಂಬಲ್ಲಿ ಟಿಪ್ಪರ್ ಲಾರಿಗೆ ಗುದ್ದಿ ಅಪಘಾತ ಸಂಭವಿಸಿದೆ. ಸಚಿವರು ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಮೂವರು ಇದ್ದರು ಎಂಬ ಮಾಹಿತಿ ಇದೆ. ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದು, ಅಪಘಾತದ ಬಳಿಕ ಸಚಿವರು ಬೇರೆ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.