ಚಿತ್ರದುರ್ಗ: ಮುರುಘಾಮಠದ ಡಾ.ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಮುರುಘಾಮಠಕ್ಕೆ ತಾತ್ಕಾಲಿಕವಾಗಿ ಉಸ್ತುವಾರಿಯನ್ನಾಗಿ ದಾವಣಗೆರೆಯ ಹೆಬ್ಬಾಳು ಶಾಖಾ ಮಠದ ಮಹಾಂತರುದ್ರ ಸ್ವಾಮೀಜಿಗಳನ್ನು ನೇಮಕ ಮಾಡಲಾಗಿದೆ.
ದಾವಣಗೆರೆ ಜಿಲ್ಲೆಯ ಹೆಬ್ಬಾಳದ ಮುರುಘಾಮಠದ ಶಾಖಾ ಮಠದ ಹಿರಿಯ ಸ್ವಾಮೀಜಿಗಳಾಗಿರುವ ಮಹಾಂತ ರುದ್ರ ಸ್ವಾಮೀಜಿ ಅವರಿಗೆ ಚಿತ್ರದುರ್ಗ ಮಠದ ಆಗುಹೋಗುಗಳ ಎಲ್ಲಾ ಜವಾಬ್ದಾರಿ ಗಳನ್ನು ಸದ್ಯಕ್ಕೆ ವಹಿಸಲಾಗಿದೆ.
ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.