Wednesday, 29th May 2024

ಕರೋನಾ ಭೀತಿ: ಮಂಡ್ಯದ ಇವೆರಡೂ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ

ಮಂಡ್ಯ : ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ಮತ್ತು ಯೋಗನರಸಿಂಹ ಸ್ವಾಮಿ ದೇವಾಲಯಗಳಿಗೆ ಶ್ರಾವಣ ಮಾಸದ ಶನಿವಾರ ಮತ್ತು ಭಾನುವಾರ ಹಾಗೂ ಸರ್ಕಾರಿ ರಜಾ ದಿನದಂದು ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಬಂಧ ಹೇರಲಾಗಿದೆ.

ದೇವಾಲಯದ ಆಡಳಿತ ಮಂಡಳಿ ಈ ಬಗ್ಗೆ ಆದೇಶ ಹೊರಡಿಸಿದ್ದು, ರಾಜ್ಯದ ನಾನಾ ಜಿಲ್ಲೆಗಳಿಂದ ದೇವಾಸ್ಥಾನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಸಾಮಾನ್ಯ ದಿನಗಳನ್ನು ಹೊರತುಪಡಿಸಿ ಶ್ರಾವಣ ಮಾಸ ಮತ್ತು ಸರ್ಕಾರಿ ರಜಾ ದಿನಗಳಂದು ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!