Sunday, 15th December 2024

Mandya Violence: ನಾಗಮಂಗಲ ಗಲಭೆ: ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಅಮಾನತು

Mandya Violence

ಮಂಡ್ಯ : ಗಣೇಶ ವಿಸರ್ಜನೆ (Ganesha procession) ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ (Mandya Violence, nagamangala violence) ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಅವರನ್ನು ಅಮಾನತು (Mandya news) ಮಾಡಲಾಗಿದೆ.

ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ನಿನ್ನೆ ರಾತ್ರಿ ಐಜಿಪಿ ಆದೇಶ ಹೊರಡಿಸಿದ್ದಾರೆ. ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೃಷ್ಟಿಯಾದ ಗಲಭೆ ರಾತ್ರಿ ವಿಕೋಪಕ್ಕೆ ಹೋಗಿತ್ತು. ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, 52 ಮಂದಿಯನ್ನು ಆರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಇದರಲ್ಲಿ 30 ಮುಸ್ಲಿಮರು ಹಾಗೂ 22 ಹಿಂದುಗಳು ಇದ್ದಾರೆ.

ಏನಿದು ಘಟನೆ?

ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಪೆಟ್ರೋಲ್‌ ಬಾಂಬ್‌ ಎಸೆದು ದಾಂಧಲೆ ನಡೆಸಿದ್ದರಿಂದ ನಾಗಮಂಗಲ(Nagamangala) ದ ಬದರಿಕೊಪ್ಪಲಿನಲ್ಲಿಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಸಂಜೆ ಅದ್ಧೂರಿ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸುವ ವೇಳೆ ಈ ಘಟನೆ ನಡೆದಿದೆ. ನಾಗಮಂಗಲದ ಮೈಸೂರು ರಸ್ತೆ(Mysore road)ಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು. ಈ ವೇಳೆ ಹಿಂದು-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿತ್ತು. ಬಳಿಕ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.

ಇನ್ನು ದುಷ್ಕರ್ಮಿಗಳ ಗುಂಪು ಅಂಗಡಿ, ಅಂಗಡಿ ಮುಂದಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದರು. ಅಷ್ಟೇ ಅಲ್ಲದೆ ರಸ್ತೆ ಮಧ್ಯೆ ಕತ್ತಿ ಹಿಡಿದು ಝಳಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸುಮಾರು 46 ಮಂದಿಯನ್ನುಅರೆಸ್ಟ್‌ ಮಾಡಿದ್ದಾರೆ. ಪ್ರಸ್ತುತ ಪ್ರದೇಶದಲ್ಲಿ 144ಸೆಕ್ಷನ್‌ ಜಾರಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಗಮಂಗಲದ ಶಾಲಾ, ಕಾಲೇಜುಗಳಿಗೆ ಗುರುವಾರ ರಜೆ ಘೊಷಿಸಲಾಗಿದೆ.

ಈ ಸುದ್ದಿ ಓದಿ: Mandya Violence: ಮಂಡ್ಯ ಗಲಭೆ ಖಂಡಿಸಿ ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ