Thursday, 12th December 2024

ಕಾವೇರಿ ನದಿ ನೀರು ಹೋರಾಟಕ್ಕೆ ಮಂಡ್ಯದಲ್ಲಿ ಥಿಯೇಟರ್ ಬಂದ್

ಮಂಡ್ಯ: ಕಾವೇರಿ ನದಿ ನೀರು ಹೋರಾಟಕ್ಕೆ ಸಂಬಂಧಿಸಿದಂತೆ ಶನಿವಾರ ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮಂಡ್ಯ ಥಿಯೇಟರ್ ಮಾಲೀಕರು ಕೂಡ ಬೆಂಬಲ ಸೂಚಿಸಿ ದ್ದಾರೆ.

ಚಿತ್ರಮಂದಿರಗಳನ್ನು ಬಂದ್ ಮಾಡುವ ಮೂಲಕ ಹೋರಾಟಕ್ಕೆ ಇಳಿದಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಮಾಡಿದರೆ, ರಾಜ್ಯಾದ್ಯಂತ ಚಿತ್ರಮಂದಿರಗಳು ಕೂಡ ಬಂದ್ ಆಗಲಿವೆ.

ಸ್ಯಾಂಡಲ್ ವುಡ್ ನಟ ನಟಿಯರು ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯ ಭಾಗದ ರೈತರ ಪರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರೆ, ನಟ ಅಭಿಷೇಕ್ ಅಂಬರೀಶ್ ನೇರವಾಗಿ ರೈತರ ಹೋರಾಟದಲ್ಲಿ ಪಾಲ್ಗೊಳ್ಳ ಲಿದ್ದಾರೆ. ಮಂಡ್ಯದಲ್ಲಿ ನಡೆಯು ತ್ತಿರುವ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ

ಕಾವೇರಿ ಹೋರಾಟಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅಂಬರೀಶ್ ಅವರು ತಮ್ಮ ಕೇಂದ್ರ ಮಂತ್ರಿ ಸ್ಥಾನವನ್ನೇ ತ್ಯಜಿಸಿದ್ದರು. ನಂತರ ಮಂಡ್ಯದ ಎಂಪಿ ಆಗಿರುವ ನಟಿ ಸುಮಲತಾ ಅಂಬರೀಶ್ ಕೂಡ ಹಲವು ದಿನಗಳಿಂದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದೀಗ ಅವರ ಪುತ್ರ ಅಭಿಷೇಕ್ ಕೂಡ ನೇರವಾಗಿ ಹೋರಾಟಕ್ಕೆ ಇಳಿಸಿದ್ದಾರೆ.