ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರೆಡ್ ರಿಬ್ಬನ್ ಕ್ಲಬ್ ಕಾಲೇಜಿನ ಸಹಯೋಗದಲ್ಲಿ ಜು.27ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಸಿದ್ದಗಂಗಾ ಮಠದ ಕ್ರಾಸ್‌ನಿಂದ ಮಹಾತ್ಮಗಾಂಧಿ (ಎ0.ಜಿ.) ಕ್ರೀಡಾಂಗಣದವರೆಗೂ 5 ಕಿ.ಮೀ.ಗಳ ಮ್ಯಾರಥಾನ್ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್ ತಿಳಿಸಿದ್ದಾರೆ.
ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಮ್ಯಾರಥಾನ್ ಸ್ಪರ್ಧೆ ಹಮ್ಮಿಕೊಂಡಿದ್ದು, ಸ್ಪರ್ಧೆಯಲ್ಲಿ 18 ರಿಂದ 25 ವರ್ಷದ ವಿದ್ಯಾರ್ಥಿಗಳು ಭಾಗ ವಹಿಸಲು ಅವಕಾಶವಿದೆ. ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ 3500 ರೂ., ತೃತೀಯ 2500 ರೂ. ಹಾಗೂ 4 ಸ್ಪರ್ಧಿ ಗಳಿಗೆ ಸಮಾಧಾನಕರ ಬಹುಮಾನವಾಗಿ 1000 ರೂ.ಗಳನ್ನು ನೀಡಲಾಗುವುದು. ವಿಜೇತರಿಗೆ ಪ್ರಮಾಣ ಪತ್ರ, ಪದಕವನ್ನು ಆಗಸ್ಟ್ 12ರಂದು ನಡೆಯುವ ಅಂತರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವುದು. ಬಹುಮಾನದ ಮೊತ್ತವನ್ನು ವಿಜೇತರ ಬ್ಯಾಂಕ್ ಖಾತೆಗೆ ಪಾವತಿಸ ಲಾಗುವುದು.
ಜಿಲ್ಲಾ ಮಟ್ಟದಲ್ಲಿ ಮೊದಲ ಬಹುಮಾನ ಪಡೆದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ರಾಜ್ಯ ಮಟ್ಟದಲ್ಲಿ ನಡೆಯುವ ಮ್ಯಾರಥಾನ್ ಸ್ಪರ್ಧೆಗೆ ಕಳುಹಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಜುಲೈ 27ರಂದು ಬೆಳಿಗ್ಗೆ 6.30 ಗಂಟೆಗೆ ಎಮ್.ಜಿ. ಕ್ರೀಡಾಂಗಣದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ 9449846987/ 8970256945/ 9538589152ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.