Sunday, 16th June 2024

ಸಾಮೂಹಿಕ ಅತ್ಯಾಚಾರ ಪ್ರಕರಣ: ಚೆನ್ನೈನಲ್ಲಿ ಐವರ ಬಂಧನ

ಮೈಸೂರು: ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಸಮೀಪ ನಡೆದ ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ಐವರು ಆರೋಪಿಗಳನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ. ಘಟನೆ ನಡೆದ 85 ಗಂಟೆಗಳ ಅವಧಿ ಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದಾರೆ. ತಾಂತ್ರಿಕ ಸಾಕ್ಷ್ಯಾಧಾರ ಗಳ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾಗಿದ್ದು, ಒಬ್ಬ ಚಾಮರಾಜನಗರದವನು ಎನ್ನಲಾಗಿದೆ. ಯುವಕ ಯುವತಿಯನ್ನು ಮೂರು ದಿನಗಳಿಂದ ಗಮನಿಸುತ್ತಿದ್ದ ಇವರು ನಾಲ್ಕನೇ ದಿನ ಈ ದುಷ್ಕೃತ್ಯ ನಡೆಸಿ ದ್ದಾರೆ ಎಂದು ತಿಳಿದುಬಂದಿದೆ.

ಆ.24ರಂದು ಈ ಘಟನೆ ನಡೆದಿತ್ತು. ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ಎಂಬಿಎ ವಿದ್ಯಾರ್ಥಿನಿಯೊಬ್ಬಳು ಸಂಜೆ 7.30ರ ವೇಳೆಗೆ ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ್ದಾಗ ಹುಡುಗನ ಮೇಲೆ ಹಲ್ಲೆ ನಡೆಸಿ, ವಿದ್ಯಾರ್ಥಿನಿಯ ಮೇಲೆ ಪಾನಮತ್ತರಾಗಿದ್ದ ಐದಾರು ಮಂದಿ ಯುವಕರ ತಂಡ ಸಾಮೂಹಿಕ ಅತ್ಯಾಚಾರ ನಡೆಸಿತ್ತು.

ಅತ್ಯಾಚಾರ ನಡೆಸಿದ ನಂತರ ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡಿದ್ದರು ಎನ್ನಲಾಗಿತ್ತು. ಆನಂತರ ಆರೋಪಿಗಳು ತಲೆಮರೆಸಿಕೊಂಡಿದ್ದರು.ವಿದ್ಯಾರ್ಥಿನಿ ಹಾಗೂ ಆಕೆಯ ಗೆಳೆಯನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!