ಫಲಾನುಭವಿಗಳಿಗೆ ವಿವಿಧ ಸಲಕರಣೆಗಳು ವಿತರಣೆ ಮಾಡಿದ ಸಚಿವ ಎಂ ಸಿ ಸುಧಾಕರ್
ಚಿಂತಾಮಣಿ: ಕಾಂಗ್ರೆಸ್ ಸರ್ಕಾರ ಚುನಾವಣಾ ಸಂದರ್ಭದಲ್ಲಿ ಐದು ಗ್ಯಾರಂಟಿಗಳು ಜಾರಿ ಮಾಡುವ ಭರವಸೆ ಕೊಟ್ಟಿದ್ದು ಆ ಭರವಸೆಯನ್ನು ಈಡೇರಿಸಿದೆ ಕೆಲವರು ಗ್ಯಾರಂಟಿಗಳ ಬಗ್ಗೆ ಸುಳ್ಳು ಆರೋಪ ಮಾಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಹೇಳಿದರು.
ಚಿಂತಾಮಣಿ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ಏರ್ಪಡಿಸಿದ್ದ ತಾಲ್ಲೂಕಿನ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳು ವಿತರಣೆ ಮಾಡಿದ ನಂತರ ಅವರು ಮಾತನಾಡಿದರು.
ನಮ್ಮ ಸರಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವು ರೀತಿಯ ಯೋಜನೆಗಳನ್ನು ರೂಪಿಸಿದ್ದು ಕಾರ್ಮಿಕರು ಇದನ್ನು ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.
ರಾಜ್ಯದ ಜನತೆಗೆ ಯಾವುದೇ ರೀತಿಯ ತೊಂದರೆಯಾಗದAತೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳ ಬಾಗಿಲಿಗೆ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಜಗನ್ನಾಥ್,ಉಪಾಧ್ಯಕ್ಷೆ ರಾಣಿಯಮ್ಮ, ತಾಲ್ಲೂಕು ದಂಡಾಧಿಕಾರಿ ಗಳಾದ ಸುದರ್ಶನ್ ಯಾದವ್,ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ್, ನಾಮ ನಿರ್ದೇಶನ ಸದಸ್ಯರಾದ ಸಮಿವುಲ್ಲಾ, ಮುಖಂಡರಾದ ಶೇಕ್ ಸಾಧಿಕ್, ಆಶ್ರಯ ಸಮಿತಿಯ ಸದಸ್ಯರಾದ ಅಕ್ಮಲ್, ನಗರಸಭಾ ಸದಸ್ಯರಾದ ಸಿ ಕೆ ಶಬ್ಬೀರ್, ರೆಡ್ಡಪ್ಪ, ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.