ತುಮಕೂರು: ಮಕ್ಕಳ ಹಕ್ಕುಗಳ ಗ್ರಾಮ ಸಭೆ ಗ್ರಾಪಂಗಳಲ್ಲಿ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕಳವಳ ವ್ಯಕ್ತಪಡಿಸಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಗಳ ಕಾರ್ಯನಿರ್ವಣಾಧಿಕಾರಿಗಳು ಹಾಗೂ ಶಿಶುಯೋಜನಾಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆಸಿದ ಮಕ್ಕಳ ರಕ್ಷಣಾ ವ್ಯವಸ್ಥೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮಕ್ಕಳ ಗ್ರಾಮ ಸಭೆಗಳ ಜತೆಗೆ ಇನ್ನಿತರೇ ಗ್ರಾಮ ಸಭೆಗಳನ್ನು ಜೋಡಿಸಬಾರದು ಎಂದು ನಿಯಮವಿದ್ದರೂ ಕೆಲವು ಪಂಚಾಯತಿಗಳು ನಿಮಯಮೀರಿ ಒಂದೇ ಸಭೆಯಲ್ಲಿ ಹಲವು ಬ್ಯಾನರ್ ಕಟ್ಟಿ ನಾಮಕಾವಸ್ಥೆ ಸಭೆ ನಡೆಸುತ್ತಿರುವ ಬಗ್ಗೆ ಆಯೋಗಕ್ಕೆ ಹಲವು ದೂರುಗಳು ಬಂದಿವೆ. ಈ ಬಗ್ಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ಕೊಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನುಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪವಿತ್ರ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.