Thursday, 12th December 2024

ಜೂ.26ಕ್ಕೆ ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಭೆ

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿರುವ ರೇವಣ ಸಿದ್ದೇಶ್ವರ ಕಂಬಳಿ ಸೊಸೈಟಿಯ ಸಭಾಂಗಣದಲ್ಲಿ ಜೂ.೨೬ರಂದು ೩ ಗಂಟೆಗೆ ತಾಲ್ಲೂಕು ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಚಿಕ್ಕನಾಯಕನಹಳ್ಳಿ ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿಯನ್ನು ಪೂರ್ಣ ಪ್ರಮಾಣದಲ್ಲಿ ರಚಿಸುವುದು. ಖ್ಯಾತನಾಮರನ್ನು ಕರೆಸಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಿ ಸಮುದಾಯವನ್ನು ಜಾಗೃತಿ ಗೊಳಿಸುವುದು. ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ಮನವರಿಕೆ ಮಾಡುವುದು. ಮತ್ತು ಸಭೆಯಲ್ಲಿ ಬರುವ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಮಿತಿ ಸಂಚಾಲಕ ಕ್ಯಾ.ಸೋಮಶೇಖರ್ ತಿಳಿಸಿದ್ದಾರೆ.