Friday, 1st December 2023

4ನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ‘ಕೈ’ನಾಯಕರು ನಡೆಸುತ್ತಿರುವ ಪಾದಯಾತ್ರೆ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದೆ.

ಬುಧವಾರ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ. ರಾಮನಗರ ದಲ್ಲಿ ಡಿ ಕೆ ಶಿವಕುಮಾರ್ ಮಾತನಾಡಲಿದ್ದಾರೆ.

ಚಿಕ್ಕೇನಹಳ್ಳಿಯಿಂದ ಮೇಕೆದಾಟು ಪಾದಯಾತ್ರೆ ಆರಂಭವಾಗಿ ಅಚ್ಚಲು ಮೂಲಕ ಮಧ್ಯಾಹ್ನ ವೇಳೆಗೆ ಸಾಗಿ ರಾತ್ರಿ ರಾಮನಗರಕ್ಕೆ ತಲುಪಲಿದೆ. ಅಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯದಲ್ಲಿ ಸೋಂಕು ತಾಂಡವವಾಡುತ್ತಿದ್ದು ಈ ಸಂದರ್ಭದಲ್ಲಿ ಕೈ ನಾಯಕರು, ಕಾರ್ಯಕರ್ತರು ಪಾದಯಾತ್ರೆ ಎಂದು ಹೋಗಿ ಇನ್ನಷ್ಟು ಸೋಂಕನ್ನು ಹಬ್ಬಿಸುತ್ತಿದ್ದೀರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೈ ನಾಯಕರ ವಿರುದ್ಧ ಈಗಾಗಲೇ ಎರಡೆರಡು ಬಾರಿ ಎಫ್‌ಐಆರ್ ದಾಖಲಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮೇಕೆದಾಟು ಪಾದಯಾತ್ರೆ ಥೀಮ್ ಸಾಂಗ್ ಬಿಡುಗಡೆಯಾಗಿದೆ.

ಜೆಡಿಎಸ್ ನ ಭದ್ರಕೋಟೆಯಲ್ಲಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಮುಂದುವರಿಯಲಿದ್ದು, ದಳ ಕೋಟೆಯಲ್ಲಿ ನೀರಿಗಾಗಿ ನಡಿಗೆ ಮಾಡುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಲಿದೆ.

error: Content is protected !!