Saturday, 13th July 2024

ಹಾಲಿನ ದರ ಹೆಚ್ಚಿಸಿದ ಕೆಎಂಎಫ್: ನಾಳೆಯಿಂದ ಜಾರಿ

ಬೆಂಗಳೂರು: ಇಂಧನ ದರ ಏರಿಕೆ ಮಾಡಿ ಜನತೆಗೆ ಶಾಕ್​ ನೀಡಿದ್ದ ರಾಜ್ಯ ಕಾಂಗ್ರೆಸ್​ ಸರ್ಕಾರವು ಇದೀಗ ಜನರಿಗೆ ಮತ್ತೊಮ್ಮೆ ಬರೆ ಎಳೆದಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಪ್ರತಿ ಲೀಟರ್‌ ಹಾಲಿನ ದರ 2.10 ರೂ. ಹೆಚ್ಚಿಸಿ ಆದೇಶ ಹೊರಡಿಸಿದೆ.

ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಹಾಲಿನ ದರ ಹೆಚ್ಚಳಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್​. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ‌ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ. ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ‌ ಮಾಡ್ತಾರೆ. ನನಗೆ ಗೊ‌ತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಕಡಿಮೆ ಇದೆ ಎಂದು ಹೇಳಿದ್ದಾರೆ.

ಸರ್ಕಾರ ಕೆಲವು ದಿನಗಳ ಹಿಂದೆ ಇಂಧನ ದರ ಏರಿಕೆ ಮಾಡಿತ್ತು. ಈ ಬೆನ್ನಲ್ಲೇ ಈಗ ಹಾಲಿನ ದರವನ್ನೂ ಹೆಚ್ಚಳ ಮಾಡಲಾಗಿದೆ.

  • ನೀಲಿ ಪ್ಯಾಕೆಟ್ ಹಾಲು 42 ರಿಂದ 44 ರೂ
  • ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) 43 ರಿಂದ 45ರೂ
  • ಆರೆಂಜ್ ಪ್ಯಾಕೆಟ್ ಹಾಲು 46ರಿಂದ 48 ರೂ
  • ಆರೆಂಜ್ ಸ್ಪೆಷಲ್ ಹಾಲು 48 ರಿಂದ 50 ರೂ
  • ಶುಭಂ ಹಾಲು 48ರಿಂದ 50 ರೂ
  • ಸಮೃದ್ದಿ ಹಾಲು 51ರಿಂದ 53ರೂ
  • ಶುಭಂ (ಟೋನ್ಡ್ ಹಾಲು) 49ರಿಂದ 51ರೂ
  • ಸಂತೃಪ್ತಿ ಹಾಲು 55 ರಿಂದ 57 ರೂ
  • ಶುಭಂ ಗೋಲ್ಡ್ ಹಾಲು 49ರಿಂದ 51ರೂ
  • ಶುಭಂ ಡಬಲ್ ಟೋನ್ಡ್ ಹಾಲು 41 ರಿಂದ 43 ರೂ ಗೆ ಏರಿಕೆ

Leave a Reply

Your email address will not be published. Required fields are marked *

error: Content is protected !!