Sunday, 15th December 2024

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದ ಭಯ: ವಿದ್ಯಾರ್ಥಿ ನಾಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ  ಪ್ರಕಟವಾಗ ಲಿರುವ ಸುದ್ದಿ ತಿಳಿಯುತ್ತಿದ್ದಂತೆ ಭಯಗೊಂಡ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್ ಗೌಡ (16) ನಾಪತ್ತೆಯಾಗಿರುವ ವಿದ್ಯಾರ್ಥಿ.

ಸುರೇಶ್ ಹಾಗೂ ರೂಪಾ ದಂಪತಿಯ ಮಗ ಚಂದನ್ ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಆತಂಕಗೊಂಡು ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಲ್ಲಿ ನಾಪತ್ತೆಯಾಗಿದ್ದಾನೆ. ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದಾನೆ. ಪೋಷಕರು ಮಗನಿಗಾಗಿ ಹುಡುಕಾಟ ನಡೆಸಿದ್ದು, ನೆಲಮಂಗಲ ಠಾಣೆಯಲ್ಲಿ ಪ್ರಕರ‍ಣ ದಾಖಲಾಗಿದೆ.