ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಮುನಿರತ್ನ (MLA Munirathna) ಅವರ ವಿರುದ್ಧ ಹಲವು ಆರೋಪಗಳು ಕೇಳಿಬಂದಿವೆ. ವಿರೋಧಿಗಳನ್ನು ಹತ್ತಿಕ್ಕಲು ಎಚ್ಐವಿ ಸೋಂಕಿತ ಮಹಿಳೆಯರನ್ನು ಹನಿಟ್ರ್ಯಾಪ್ಗೆ ಶಾಸಕ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಇದೀಗ, ಶಾಸಕನ ಮನೆಯಲ್ಲಿ ಸಿಕ್ಕ ಲ್ಯಾಪ್ಟಾಪ್ ಮತ್ತು ಪೆನ್ಡ್ರೈವ್ನಲ್ಲಿ ಬಿಜೆಪಿ ಸೇರಿ ವಿವಿಧ ರಾಜಕೀಯ ನಾಯಕರ ಅಶ್ಲೀಲ ವಿಡಿಯೊ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ತನಿಖೆಯ ಭಾಗವಾಗಿ ಶಾಸಕ ಮುನಿರತ್ನ ಮನೆ ಮೇಲೆ ಸೆ.28ರಂದು ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿ, ಲ್ಯಾಪ್ಟಾಪ್ ಮತ್ತು ಪೆನ್ಡ್ರೈವ್ ಸೇರಿ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಅವುಗಳನ್ನು ಪರಿಶೀಲನೆ ಮಾಡಿದ ವೇಳೆ ಹಲವು ಅಧಿಕಾರಿಗಳು ಹಾಗೂ ರಾಜಕಾರಣಿಗಳ ಖಾಸಗಿ ವಿಡಿಯೊಗಳು ಸಿಕ್ಕಿವೆ ಎನ್ನಲಾಗಿದೆ. ಹನಿಟ್ರ್ಯಾಪ್ ಮಾಡಲು ಈ ವಿಡಿಯೊಗಳನ್ನು ಚಿತ್ರೀಕರಣ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಇನ್ನು ಜಾತಿ ನಿಂದನೆ, ಜೀವ ಬೆದರಿಕೆ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುನಿರತ್ನ ಮೊಬೈಲ್ ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ, ಮೊಬೈಲ್ ಕೋಲಾರದಲ್ಲಿ ಕಳೆದು ಹೋಗಿರುವುದಾಗಿ ಶಾಸಕ ಹೇಳಿದ್ದರು. ಹೀಗಾಗಿ ಮೊಬೈಲ್ನ ಐಎಂಇಐ ನಂಬರ್ ವಿವರ ಆಧರಿಸಿ ಮೊಬೈಲ್ ಪತ್ತೆಗೆ ಅಧಿಕಾರಿಗಳು ಮುಂದಾಗಿದ್ದಾರೆ.
ಮತ್ತೊಂದೆಡೆ ಲ್ಯಾಪ್ಟಾಪ್ ಮತ್ತು ಪೆನ್ಡ್ರೈವ್ಗಳಲ್ಲಿ ಸಿಕ್ಕಿರುವ ವಿಡಿಯೊಗಳು ಅಸಲಿಯೇ ಅಥವಾ ನಕಲಿಯೇ ಎಂಬ ಬಗ್ಗೆ ಪರಿಶೀಲಿಸಲು ಲ್ಯಾಪ್ಟಾಪ್, ಪೆನ್ಡ್ರೈವ್ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ-ಮೂವರು ಆರೋಪಿಗಳು ಬಿಡುಗಡೆ
ತುಮಕೂರು: ನಗರದ ಊರುಕೆರೆ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳು ಜೈಲಿ ನಿಂದ ಬಿಡುಗಡೆಯಾಗಿದ್ದಾರೆ.
A- 16 ಕೇಶವಮೂರ್ತಿ, A-15 ಕಾರ್ತಿಕ್, A-17 ನಿಖಿಲ್ ನಾಯಕ್ ತುಮಕೂರು ಜೈಲಿನಿಂದ ಬುಧವಾರ ಬೆಳಗ್ಗೆ ಬಿಡುಗಡೆಯಾಗಿದ್ದಾರೆ.
ಕಳೆದ ತಿಂಗಳ ಸೆಪ್ಟೆಂಬರ್ 23 ರಂದು ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. 10 ದಿನಗಳ ಬಳಿಕ ಮೂವರು ಹೊರ ಬಂದಿದ್ದಾರೆ. ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ನಿಂದ ಜಾಮೀನು ಸಿಕ್ಕರೆ ಆರೋಪಿ ನಿಖಿಲ್ ನಾಯಕ್ ಹಾಗೂ ಕಾರ್ತಿಕ್ ಗೆ 57ನೇ ಸಿಸಿಹೆಚ್ ಕೋರ್ಟ್ನಿಂದ ಜಾಮೀನು ಸಿಕ್ಕಿತ್ತು.
ಇದನ್ನೂ ಓದಿ: Chikkaballapur Crime: ಸಿಲ್ವರ್ ಕೆಫೆ ಮುಂಭಾಗ ಆಟೋ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ಕೋರ್ಟ್ನಲ್ಲಿ ಜಾಮೀನು ಸಿಕ್ಕರೂ ಶೂರಿಟಿದಾರರು ಸಿಗದೇ ಪರದಾಟ ನಡೆಸಿದ್ದರು. ಸತತ 9 ದಿನಗಳಿಂದ ಶೂರಿಟಿ ದಾರರು ಸಿಗದೇ ಕುಟುಂಬಸ್ಥರು ಸಂಕಷ್ಟ ಎದುರಿಸಿದ್ದರು. ಮಂಗಳವಾರ ಜಾಮೀನು ಶೂರಿಟಿ ಪ್ರಕ್ರಿಯೆ ಪೂರ್ಣಗೊಂಡಿತ್ತು. ಬುಧವಾರ ಬಿಡುಗಡೆ ಪ್ರಕ್ರಿಯೆ ಮುಗಿಸಿ ಮೂವರು ಆರೋಪಿಗಳು ಜೈಲಿನಿಂದ ರಿಲೀಸ್ ಆಗಿದ್ದಾರೆ.