ಬಾಗೇಪಲ್ಲಿ: ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ದನಾಗಿದ್ದು ವಿಧಾನ ಸಭೆಯ ಅಧಿವೇಶನ ಒತ್ತಡದ ನಡುವೆಯೂ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದೇನೆ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು.
ಬಾಗೇಪಲ್ಲಿ ಕಸಭಾ ಹೋಬಳಿ ಪರಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊತ್ತಕೋಟಿ ಗ್ರಾಮದ ಎನ್.ಎಚ್.೭ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ರಸ್ತೆಗೆ ೨೫ ಲಕ್ಷ ರೂಪಾಯಿಗಳ ಅನುಮಾನದಲ್ಲಿ ಹಾಗೂ ಘಂಟಂವಾರಿಪಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲೋನಿಗೆ ೧೫ ಲಕ್ಷ ರೂಪಾಯಿಗಳ ವೆಚ್ಚದ ಸಿ.ಸಿ.ರಸ್ತೆಗೆ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರು ರಸ್ತೆ ನಿರ್ಮಾಣ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಅಭಿವೃದ್ಧಿಗೆ ನಾನು ಸದಾ ಬದ್ದ ಹಾಗೂ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಬಾರದು ಎನ್ನುವುದು ನನ್ನ ಉದ್ದೇಶವಾಗಿದೆ ಎಂದು ಹೇಳಿದರು.
ಸ್ಥಳೀಯರ ಸಲಹೆ ಸೂಚನೆ ಪಡೆದು, ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆ ದಾರರಿಗೆ ಸೂಚಿಸಿದ್ದೇನೆ ಎಂದರು. ಈ ವೇಳೆ ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮಸ್ಥರು, ಸೇರಿದಂತೆ ಹಲವರು ಉಪಸ್ಥಿತರಿದ್ದರು.