Sunday, 15th December 2024

ಶಾಸಕ ಶಿವರಾಮ ಹೆಬ್ಬಾರ್ ಪುತ್ರ ’ಕೈ’ಗೆ ಸೇರ್ಪಡೆ

ಶಿರಸಿ: ಯಲ್ಲಾಪುರ ವಿಧಾನಸಭಾಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪುತ್ರ, ಉದ್ಯಮಿ ವಿವೇಕ ಹೆಬ್ಬಾರ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ಶಿರಸಿಯ ಬನವಾಸಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಪಂಚಾಯಿತಿಯ ಐದನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ವೆಂಕಟೇಶ್ ಹೆಗಡೆ, ಡಿಸೋಜ, ಪ್ರಕಾಶ ಹೆಗಡೆ, ಜಿಲ್ಲಾಧ್ಯಕ್ಷ ಸಾಯಿ ಗೌಂವ್ಕರ್, ದ್ಯಾಮಣ್ಣ, ಬಸವರಾಜ, ಮಂಗಲಾ ನಾಯ್ಕ, ಶ್ರೀಲತಾ ಕಾಳೇರಮನೆ, ಮುಂತಾದವರು ವೇದಿಕೆಯಲ್ಲಿದ್ದರು.