ಉಡುಪಿ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಹತ್ತು ಜನ ಪುರುಷರಿಗೆ ಇರುವ ಶಕ್ತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇದೆ. ಅವರ ಆಸ್ಥೆಯಿಂದಲೇ ಇಂದು ರಾಜ್ಯಾದ್ಯಂತ ಗೃಹ ಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಜಾರಿಯಾಗಿದೆ ಎಂದು ತಿಳಿಸಿದ್ದಾರೆ.
ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಆಡಳಿತ ವೈಖರಿ ಇತರರಿಗೂ ಮಾದರಿಯಾಗಿದೆ ಎಂದು ವಿನಯ್ ಗುರೂಜಿ ಹೇಳಿದರು.