ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 9 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಜೂನ್ 23ಕ್ಕೆ ಶುಕ್ರವಾರ ನಗರದ ಗಾಜೀನಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ,ಜೂನ್ 23ಕ್ಕೆ ನಡೆಯುವ 9 ವರ್ಷಗಳ ಸಾಧನಾ ಸಮಾವೇಶ ದಲ್ಲಿ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪಕ್ಷದ ಪದಾಧಿಕಾರಿಗಳು,ಮುಖಂಡರು ಸೇರಿದಂತೆ ಸುಮಾರು 5 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸುಮಾರು 9 ತಂಡಗಳ ನೇತೃತ್ವದಲ್ಲಿ ಈ ಸಾಧನಾ ಸಮಾವೇಶ ನಡೆ ಯುತ್ತಿದ್ದು, ಯಡಿಯೂರಪ್ಪ ನೇತೃತ್ವದ ತಂಡ ತುಮಕೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ, ಗೋವಿಂದ ಕಾರಜೋಳ, ಸಂಸದರಾದ ಜಿ.ಎಸ್,ಬಸವರಾಜು,ಪಿ.ಸಿ.ಮೋಹನ್,ಮಾ ಜಿ ಸಚಿವರಾದ ಮಾಧುಸ್ವಾಮಿ,ರೇಣುಕಾಚಾರ್ಯ,ಮಾಜಿ ಸಂಸದ ಮುದ್ದಹನುಮೇಗೌಡ ಭಾಗವ ಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ವಿವರ ನೀಡಿದರು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳ 9 ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಪ್ರೇರಣಾ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ. ಇದರ ಜತೆಗೆ ಜೂನ್ 23 ರಿಂದ 30ರವರಗೆ ಜಿಲ್ಲೆಯಲ್ಲಿ ನರೇಂದ್ರಮೋದಿ ಅವರ ಸಾಧನೆಗಳನ್ನು ಒಳಗೊಂಡ ಭಿತ್ತಿಪತ್ರ ವನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಅಂಬಿಕಾ ಹುಲಿನಾಯ್ಕರ್, ಯುವಮೋರ್ಚಾ ಅಧ್ಯಕ್ಷ ಯಶಸ್,ಮಾಧ್ಯಮ ಸಂಚಾಲಕ ಟಿ.ಆರ್.ಸದಾಶಿವಯ್ಯ, ಸಹ ಸಂಚಾಲಕ ಜೆ.ಜಗದೀಶ್, ಮುಖಂಡರಾದ ರುದ್ರೇಶ್ ಉಪಸ್ಥಿತರಿದ್ದರು.