Thursday, 3rd October 2024

ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು: ಜನಾರ್ದನ ರೆಡ್ಡಿ

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಬಿಜೆಪಿ ಮರುಸೇರ್ಪಡೆ ಬೆನ್ನಲ್ಲಿಯೇ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಕಡೆ ಒಲವು ತೋರಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಯಸಿದರೆ ಹೊಂದಾಣಿಕೆಗೆ ಸಿದ್ದ ಎಂದು ಘೋಷಿಸಿದ್ದಾರೆ.
ಕುಷ್ಟಗಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು.
ಬಿಜೆಪಿಯೊಂದಿಗೆ ಹೊಂದಾಣಿಕೆ ಇಲ್ಲದೆ ಲೋಕಸಭೆ ಸ್ಪರ್ಧಿಸಿದರೂ ಮೋದಿ ಪ್ರಧಾನಿಯಾಗಲು ಬೆಂಬಲ ನೀಡುತ್ತೇನೆ. ಆದರೆ ಕೆಆರ್ ಪಿಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತೇವೆ, ಯಾವುದೇ ಕಾರಣಕ್ಕೆ ಬಿಜೆಪಿ ಸೇರುವುದಿಲ್ಲ. ಬಿಜೆಪಿ ಬೆಂಬಲಿಸುತ್ತೇನೆ.ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.
ಸಿದ್ದರಾಮಯ್ಯ ಸರಕಾರದಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ಕೇವಲ ಗ್ಯಾರಂಟಿ ಯೋಜನೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿ ಯಾಗಲಿದೆ. ಇಲ್ಲಿಯ ದೇವಸ್ಥಾನದ ಮೂಲಸ್ವರೂಪ ಬದಲಾವಣೆ ಮಾಡೋದಿಲ್ಲ. ಆದರೆ ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡಲಾಗಿದೆ. ಫೆಬ್ರುವರಿ ಅಂತ್ಯಕ್ಕೆ ಆನೇಗೊಂದಿ ಉತ್ಸವ ನಡೆಸಲಾಗುವುದು.ಈ ಕುರಿತು ಜಿಲ್ಲಾಧಿಕಾರಿಗಳಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.