Saturday, 21st December 2024

ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಕಾಂಗ್ರೆಸ್’ಗೆ ಸೇರ್ಪಡೆ

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಗುರುವಾರ ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿಯ ಮಾಜಿ ಸಂಸದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಚಿವರಾದ ಜಿಪರಮೇಶ್ವರ್ ರಾಜಣ್ಣ ಸಮ್ಮುಖದಲ್ಲಿ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಮುದ್ದಹನುಮೇಗೌಡ ಪಕ್ಷ ಸೇರ್ಪಡೆಗೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸು ತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಮುದ್ದಹನುಮಗೌಡ ತುಮಕೂರು ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ತುಮಕೂರಿನಿಂದ ಟಿಕೆಟ್ ಕೈತಪ್ಪಿದ್ದರಿಂದ ಕೋಪಗೊಂಡು ಕಾಂಗ್ರೆಸ್ ತೊರೆದು ಮುದ್ದ ಹನುಮೇಗೌಡ ಬಿಜೆಪಿ ಸೇರಿದ್ದರು.ಇದೀಗ ಬಿಜೆಪಿಯನ್ನು ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿ ದ್ದರು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಲ್ಲೂ ಕೂಡ ಅವರಿಗೆ ಟಿಕೆಟ್ ಕೈತಪ್ಪಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಕೈತಪ್ಪುವ ಭೀತಿಯಲ್ಲಿ ಇದೀಗ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.