Saturday, 14th December 2024

ಲಾರಿಗೆ ಓಮ್ನಿ ಕಾರ್ ಡಿಕ್ಕಿ: ನಾಲ್ವರ ಸಾವು

ಚಿಕ್ಕಮಗಳೂರು: ಲಾರಿಗೆ ಓಮ್ನಿ ಕಾರ್ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಓಮ್ನಿಯಲ್ಲಿದ್ದವರು ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ಮರಳುವಾಗ ಈ ದುರ್ಘಟನೆ ನಡೆದಿದೆ. ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಗಾಯಗೊಂಡವರನ್ನ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ವೇಗವಾಗಿ ಬಂದ ಓಮ್ನಿ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾವನ್ನಪ್ಪಿರು ವವರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತದ ಲಾರಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.