Thursday, 12th December 2024

Murder Case: ಪ್ರಿಯಕರನೊಂದಿಗೆ ಸರಸ ಸಲ್ಲಾಪ ನೋಡಿದ ತಾಯಿಯ ಕೊಲೆ ಮಾಡಿದ ಮಗಳು!

murder case

ಬೆಂಗಳೂರು: ತನ್ನ ಪ್ರಿಯತಮನೊಂದಿಗೆ (Boyfriend) ಸರಸ ಸಲ್ಲಾಪದಲ್ಲಿದ್ದ ಮಗಳು (Daughter), ಇದನ್ನು ಪ್ರಶ್ನಿಸಿದ್ದಕ್ಕಾಗಿ ತನ್ನ ತಾಯಿಯನ್ನೇ ಕೊಲೆ (Murder case) ಮಾಡಿದ ಘಟನೆ ಬೆಂಗಳೂರಿನಲ್ಲಿ (Bangalore Crime news) ನಡೆದಿದೆ. ಯುವತಿ ತನ್ನ ಪ್ರಿಯಕರನೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾಳೆ.

ಈ ಘಟನೆ ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ನಡೆದಿದೆ. ಜಯಲಕ್ಷ್ಮಿ (46) ಕೊಲೆಯಾದ ದುರ್ದೈವಿ ತಾಯಿ. ಪುತ್ರಿ ಸ್ನೇಹಿತನ ಜೊತೆ ಸೇರಿ ತಾಯಿಯನ್ನು ಕತ್ತು ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಈ ಕುರಿತು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯಾಗಿರುವ ಮಹಿಳೆ ದಿನಸಿ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು.

ಇತ್ತ ಆಕೆಯ ಮಗಳು ಸ್ನೇಹಿತನ ಜೊತೆ ಸಂಬಂಧ ಹೊಂದಿದ್ದಳು. ತಾಯಿ ಇಲ್ಲದ ವೇಳೆ ಆತನ ಮನೆಗೆ ಬರುತ್ತಿದ್ದ. ಅಂಥ ಒಂದು ಸಂದರ್ಭದಲ್ಲಿ ಮನೆಗೆ ಹಿಂದಿರುಗಿದ ತಾಯಿ, ಮಗಳ ಕೃತ್ಯವನ್ನು ನೋಡಿದ್ದಾಳೆ. ಇದರಿಂದ ಗಾಬರಿಗೊಂಡ ಮಗಳು, ಪ್ರಿಯಕರನೊಂದಿಗೆ ಸೇರಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದಲಿತ ಯುವಕನನ್ನು ಕಟ್ಟಿ ಹಾಕಿ ಹಲ್ಲೆ

ಕೊಪ್ಪಳ: ದಲಿತ ಯುವಕನೊಬ್ಬನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ (Assault Case) ಮಾಡಿರುವ ಅಮಾನವೀಯ ಘಟನೆ ಕೊಪ್ಪಳ ತಾಲೂಕಿನ ಬೋಚನ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಯುವಕನನ್ನು ಗುಡದಪ್ಪ ಮುಳ್ಳಣ್ಣ(21) ಎಂದು ಗುರುತಿಸಲಾಗಿದೆ.

“ಸೆ.9ರಂದು ಬೆಳಗ್ಗೆ ಗ್ರಾಮದ ಕಟ್ಟೆಯ ಮೇಲೆ ಕುಳಿತು ಸಿಗರೇಟ್ ಸೇದುತ್ತಿದ್ದಾಗ ಅಲ್ಲಿಗೆ ಬಂದ ಯುವಕರ ಗುಂಪು ಸಿಗರೇಟ್ ಸೇದಬಾರದು ಎಂದು ನನ್ನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾಗಿದ್ದಾರೆ. ನಾನು ಭಯಗೊಂಡು ಅಲ್ಲಿಂದ ಮನೆ ಕಡೆಗೆ ಹೋದೆ. ಅದೇ ದಿನ ಸಂಜೆ ಗಣಪತಿ ವಿಸರ್ಜನೆ ವೀಕ್ಷಿಸಲು ಹೋದಾಗ ಮದ್ಯ ಸೇವಿಸಿದ್ದ ಯುವಕರ ಗುಂಪು ನನ್ನ ಮೇಲೆ ಹಲ್ಲೆ ಮಾಡಿ, ತಲೆಗೆ ಹೊಡೆದಿದ್ದಾರೆ. ಬಳಿಕ ತೊಟ್ಟಿದ್ದ ಬಟ್ಟೆಯನ್ನು ಬಿಚ್ಚಿಸಿದ್ದಾರೆ. ಕಂಬಕ್ಕೆ ಕಟ್ಟಿ ಚಪ್ಪಲಿಯಿಂದ ಹೊಡೆದಿದ್ದಾರೆ” ಎಂದು ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಸಂತ್ರಸ್ತ ಯುವಕ ಗುಡದಪ್ಪ ವಿವರಿಸಿದ್ದಾರೆ.

ಗ್ರಾಮದ ನಾಗನಗೌಡ, ಯಲ್ಲಪ್ಪ, ಭೀಮಪ್ಪ, ಹನುಮಗೌಡ , ಪ್ರಜ್ವಲ್ ಹಾಗೂ ನವೀನ್ ಆರೋಪಿಗಳು ಎಂದು ತಿಳಿದು ಬಂದಿದೆ. ಈ ಸಂಬಂಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಒಟ್ಟು 6 ಜನ ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ. ಸಂತ್ರಸ್ತ ಯುವಕ ಸೇರಿ ಆರು ಮಂದಿಯ ವಿರುದ್ಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Murder Case: ತ್ರಿಕೋನ ಪ್ರೇಮ ಪ್ರಕರಣ; ಪ್ರಿಯಕರನಿಗಾಗಿ ಇನ್ಸ್‌ಪೆಕ್ಟರ್‌ ಕೊಲೆಗೆ ಸ್ಕೆಚ್‌ ಹಾಕಿದ ಲೇಡಿ ಕಾನ್‌ಸ್ಟೇಬಲ್‌!