Thursday, 21st November 2024

Murder Case: ಮನೆ ಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ವ್ಯಕ್ತಿಯ ಬರ್ಬರ ಕೊಲೆ; ಐವರು ವಶಕ್ಕೆ

Murder Case

ರಾಯಚೂರು: ಪಟಾಕಿ ಹೊಡೆಯುವ ವಿಚಾರಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ (Murder Case) ಅಂತ್ಯವಾಗಿರುವ ಘಟನೆ ರಾಯಚೂರು ನಗರದ ರಾಗಿಮಾನಗಡ್ಡದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನರಸಿಂಹಲು (32) ಕೊಲೆಯಾದವರು. ಕೊಲೆಯಾದ ನರಸಿಂಹಲು ಮನೆಯ ಮುಂದೆ ಯುವಕರು ಪಟಾಕಿ ಸಿಡಿಸುತ್ತಿದ್ದರು. ಇದಕ್ಕೆ ವಿರೋಧಿಸಿದ್ದ ನರಸಿಂಹಲು ಮನೆಯಲ್ಲಿ ಮಕ್ಕಳಿದ್ದಾರೆ, ಮನೆ ಮುಂದೆ ಪಟಾಕಿ ಸಿಡಿಸಬೇಡಿ ಎಂದು ಹೇಳಿದ್ದರು. ಇದರಿಂದಾಗಿ ಕೆರಳಿದ್ದ ಹಂತಕರು ನರಸಿಂಹಲು ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ನರೇಶ್, ಪ್ರವೀಣ್ ಮೇಲೆ ಮಚ್ಚಿನಿಂದ ವ್ಯಕ್ತಿ ಹಲ್ಲೆ ಮಾಡಿದ್ದಾರೆ. ಆಗ ಹಲ್ಲೆಗೊಳಗಾದ ಯುವಕರು ಹಾಗೂ ಅವರ ಕಡೆಯ ಯುವಕರೊಂದಿಗೆ ಬಂದು ನರಸಿಂಹನ ಹತ್ಯೆ ಮಾಡಿದ್ದಾರೆ.

ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿಲ್ಲ. ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆಗೊಳಗಾದ ಕಡೆಯವರು ನರಸಿಂಹಲುನನ್ನು ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಅಲ್ಲದೇ ಮೃತನ ವಿರುದ್ಧವೂ ಹಲ್ಲೆಗೊಳಗಾದವರು ಕೌಂಟರ್ ಕೇಸ್ ದಾಖಲಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನೂ ಓದಿ | Wasim Rizvi : ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ವಕ್ಛ್‌ ಬೋರ್ಡ್‌ ಮಾಜಿ ಅಧ್ಯಕ್ಷನ ಜಾತಿಯೂ ಈಗ ಬದಲು!

ಕಲಬುರಗಿಯಲ್ಲಿ ಮಹಿಳೆಯ ಭೀಕರ ಕೊಲೆ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಕಲಬುರಗಿ: ಮಹಿಳೆಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ (Murder Case) ಕಲಬುರಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಜ್ಯೋತಿ (29) ಕೊಲೆಯಾದ ಮಹಿಳೆ. ನಗರದ ಸಂಗಮೇಶ್ವರ ಕಾಲೋನಿಯಲ್ಲಿರುವ ಗಂಡನ ಮನೆಯಲ್ಲಿ ಮಹಿಳೆ ಇದ್ದಳು. ಕಳೆದ 5 ವರ್ಷಗಳ ಹಿಂದೆ ಗಂಡನ ಮನೆ ತೊರೆದು, ತವರು ಮನೆಗೆ ಹೋಗಿದ್ದಳು ಎಂದು ತಿಳಿದುಬಂದಿದೆ. ನೆನ್ನೆ ಮಧ್ಯಾಹ್ನ ಮನೆಯಿಂದ ಹೊರಗೆ ಹೋದಾಗ, ಆಕೆಯ ಶವವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.