Tuesday, 22nd October 2024

Murder Case: ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ; ಯುವಕನನ್ನು ಕೊಚ್ಚಿ ಕೊಂದ ಪತಿ!

Murder Case

ವಿಜಯನಗರ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಪತಿಯೊಬ್ಬ ಯುವಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ (Murder Case) ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲುಗೋಡು ಗ್ರಾಮದಲ್ಲಿ ನಡೆದಿದ್ದು, ಕೊಲೆ ಮಾಡಿದ ಬಳಿಕ ಆರೋಪಿಯು ಪೊಲೀಸರಿಗೆ ಶರಣಾಗಿದ್ದಾನೆ.

ಆನಂದೇವನಹಳ್ಳಿ ಬಸವರಾಜ್ (26) ಕೊಲೆಯಾದ ಯುವಕ. ಚಿಲುಗೋಡು ಗ್ರಾಮದ ಬಸರಕೋಡು ಪಕ್ಕೀರಸ್ವಾಮಿ ಅರೋಪಿಯಾಗಿದ್ದಾನೆ. ಕೊಲೆಯಾದ ಯುವಕ ಬಸವರಾಜ್, ಪಕ್ಕೀರಸ್ವಾಮಿ ಅವರ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಮೂರು ತಿಂಗಳ ಹಿಂದೆ ಬಸವರಾಜ್ ಮತ್ತು ಫಕೀರಪ್ಪನ ಹೆಂಡತಿ ಓಡಿ ಹೋಗಿದ್ದರು. ಈ ಕುರಿತು ಫಕೀರಪ್ಪ ತಂಬ್ರಹಳ್ಳಿ ಠಾಣೆಗೆ ದೂರು ನೀಡಿದ್ದ. ಬಳಿಕ ಪೊಲೀಸರು ಇವರಿಬ್ಬರನ್ನು ಪತ್ತೆ ಹಚ್ಚಿ ರಾಜಿ ಪಂಚಾಯಿತಿ ಮೂಲಕ ಸಂಧಾನ ನಡೆಸಿದ್ದರು. ಅದಾದ ಬಳಿಕ ಬಸವರಾಜ್ ಇತ್ತೀಚಿಗೆ ಊರಿಗೆ ಬಂದಿದ್ದ. ಮತ್ತೆ ತನ್ನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಫಕೀರಪ್ಪ ಶಂಕೆ ವ್ಯಕ್ತಪಡಿಸಿದ್ದಾನೆ.

ಕೋಪದಲ್ಲಿ ಶನಿವಾರ ಹಗರಿಬೊಮ್ಮನಹಳ್ಳಿ ಮುಖ್ಯ ರಸ್ತೆಯ ಪಕ್ಕದ ವೀರ ಯೋಧ ಮೌನೇಶ್ ಪುತ್ಥಳಿ ಮುಂಭಾಗದಲ್ಲೇ ಹಾಡಹಗಲೇ ಕೊಡಲಿಯಿಂದ ತಲೆ ಮತ್ತು ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತಂಬ್ರಹಳ್ಳಿ ಪೋಲಿಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಈ ಸುದ್ದಿಯನ್ನೂ ಓದಿ | Wall Collapased: ಗೋಡೆ ಕುಸಿತ; 7 ಏಳು ಮಂದಿ ಬಲಿ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಭೀತಿ

ಬಿಎಸ್‌ ಯಡಿಯೂರಪ್ಪ ಆಪ್ತನ ಮೇಲೆ ಹಲ್ಲೆ ನಡೆಸಿ ಹಣ ದರೋಡೆ

robbery case gadag

ಗದಗ: ಗದಗದಲ್ಲಿ (Gadag Crime news) ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಅವರ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಹಣ ದೋಚಿ (Robbery case) ಪರಾರಿಯಾಗಿದ್ದಾರೆ.

ದ್ರಾಕ್ಷಾರಸ ಮಂಡಳಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ, ಉದ್ಯಮಿ ಕಾಂತಿಲಾಲ್ ಬನ್ಸಾಲಿ ಅವರನ್ನು ದೋಚಲಾಗಿದೆ. ಎಪಿಎಂಸಿಯಿಂದ ಮಧ್ಯಾಹ್ನ 2.30 ಗಂಟೆ ಸುಮಾರಿಗೆ ಭೂಮರೆಡ್ಡಿ ಸರ್ಕಲ್ ಬಳಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಅಪರಿಚಿತರು ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾರೆ.

ಬಳಿಕ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ಮಾಡಿ, ಶರ್ಟ್‌ ಹರಿದು ಅವರ ಬಳಿ ಇದ್ದ 50 ಸಾವಿರ ರೂಪಾಯಿ ಹಣ ದೋಚಿ ಪರಾರಿ ಆಗಿದ್ದಾರೆ. ಮಾತ್ರವಲ್ಲ ನಿಂದು ಬಹಳ ಆಗಿದೆ ಅಂತ ಅವಾಜ್ ಹಾಕಿದ್ದಾರೆ. ಸಾರ್ವಜನಿಕರು ಸ್ಥಳಕ್ಕೆ ಬರುತ್ತಿದ್ದಂತೆ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಬಿಜೆಪಿ ಮುಖಂಡರೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿದ ಕಾಂತಿಲಾಲ್ ದೂರು ದಾಖಲಿಸಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದು ಹಣಕ್ಕಾಗಿ ದುಷ್ಕರ್ಮಿಗಳು ನಡೆಸಿದ ಹಲ್ಲೆಯೋ ಅಥವಾ ರಾಜಕೀಯ ವಿರೋಧಿಗಳು ಮಾಡಿಸಿದ ಹಲ್ಲೆಯೋ ಎಂಬ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಗದಗ ಕ್ಷೇತ್ರದ ಬಿಜೆಪಿ ಬೆಳವಣಿಗೆ ಬಗ್ಗೆ ಕಾಂತಿಲಾಲ್‌ ಬಹಿರಂಗವಾಗಿ ಮಾತನಾಡಿದ್ದರು. ಬಿಜೆಪಿ ಮುಖಂಡರು ಇವರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮಾಜಿ ನಿಗಮ ಮಂಡಳಿ ಅಧ್ಯಕ್ಷರಿಗೆ ರಕ್ಷಣೆ ಇಲ್ಲದಿದ್ದರೆ, ಸಾಮಾನ್ಯ ಜನರಿಗೆ ರಕ್ಷಣೆ ಎಲ್ಲಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಗದಗನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ ಹೊರಹಾಕಿದರು.

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ. ನಕಲಿ ಖಾತೆ ಕುರಿತಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಇದನ್ನೂ ಓದಿ: Crime News: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡುತ್ತಿದ್ದ ದಂಪತಿ ಆರೆಸ್ಟ್

ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಫೋಟೋ, ಹೆಸರು, ಹುದ್ದೆ, ಸಂಸ್ಥೆಯ ಹೆಸರು ದುರ್ಬಳಕೆ ಮಾಡಿಕೊಂಡು ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದೆ. ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಖಾತೆಯನ್ನು ಡಿಲೀಟ್ ಮಾಡಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು ನೀಡಲಾಗಿದೆ.