Saturday, 14th December 2024

ವಿಚಾರಣೆ ತೀವ್ರಗೊಂಡಂತೆ ಡಿ ಗ್ಯಾಂಗ್​ನ ಕರಾಳ ಮುಖ ಬೆಳಕಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್​ ಹಾಗೂ ಅವರ ಆಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ವಿಚಾರಣೆ ತೀವ್ರಗೊಂಡಂತೆ ಡಿ ಗ್ಯಾಂಗ್​ನ ಕರಾಳ ಮುಖ ಬೆಳಕಿಗೆ ಬರುತ್ತಿದ್ದು, ರೇಣುಕಸ್ವಾಮಿಗೆ ಹೇಗೆಲ್ಲಾ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳನ್ನು 9 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೋರಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ವಾದ-ಪ್ರತಿವಾದವನ್ನು ಆಲಿಸಿದ ಬಳಿಲ ಐದು ದಿನ ಗಳ ಕಾಲ ಕಸ್ಟಡಿ ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ ಇನ್ನು ಕೋರ್ಟ್​ ವಿಚಾರಣೆ ವೇಳೆ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರಾಗಿ ನೇಮಕವಾಗಿ ರುವ ಪ್ರಸನ್ನಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಗಮನಕ್ಕೆ ವಿಚಾರ ಒಂದನ್ನು ತಂದಿದ್ದು, ಡಿ ಗ್ಯಾಂಗ್​ನ ಕರಾಳ ಮುಖ ಬೆಳಕಿಗೆ ಬಂದಿದೆ.

ಆರೋಪಿಗಳು ರೇಣುಕಸ್ವಾಮಿಗೆ ಕರೆಂಟ್​ ಶಾಕ್​ ನಿಡಿದ್ದು, ಹತ್ಯೆ ನಡೆದ ಜಯಣ್ಣ ಶೆಡ್​ನಲ್ಲಿದ್ದ ಮೆಗ್ಗರ್​​ ಯಂತ್ರವನ್ನು ಪೊಲೀಸರು ವಶಪಡಿಸಕೊಳ್ಳ ಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಕೆಲವೆಡೆ ಮಹಜರು ಮಾಡಬೇಕಿದ್ದು, ಆರೋಪಿಯ ಬಟ್ಟೆ, ಚಪ್ಪಲಿ ಸೇರಿಚಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಬೇಕಿದೆ. ಹೀಗಾಗಿ ನ್ಯಾಯಾಲಯ ತಮ್ಮ ಮನವಿಯನ್ನು ಪುರಸ್ಕರಿಸುವಂತೆ ವಕೀಲ ಪ್ರಸನ್ನಕುಮಾರ್​ ಮನವಿ ಮಾಡಿದ್ದಾರೆ.