Saturday, 27th July 2024

ಮೈ ಷುಗರ್ ಕಾರ್ಖಾನೆ ಇದೇ ವರ್ಷ ಪುನರಾರಂಭ

ಮಂಡ್ಯ: ಸ್ಥಗಿತಗೊಂಡಿದ್ದ (2019-20ರಿಂದ) ಮೈ ಷುಗರ್ ಕಾರ್ಖಾನೆಯನ್ನು ಇದೇ ವರ್ಷ ಪುನರಾರಂಭಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯ ಸರ್ಕಾರ ಮಂಡ್ಯ ರೈತರ ಪರವಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ ಹೇಳಿದರು.

ಬುಧವಾರ ಮಂಡ್ಯ ನಗರದ ಮೈ ಷುಗರ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಜಿಲ್ಲಾಧಿ ಕಾರಿ ಎಸ್. ಅಶ್ವತಿ ಉಪಸ್ಥಿತರಿದ್ದರು.

ತನ್ನದೇ ಇತಿಹಾಸವನ್ನು ಹೊಂದಿರುವ ಮೈ ಷುಗರ್ ಕಂಪನಿಯನ್ನು ಪುನಃಶ್ಚೇತನ ಗೊಳಿಸುವಲ್ಲಿ ಸರ್ಕಾರ ಮಂಡ್ಯ ಜನತೆಯ ಪರವಾಗಿಯೇ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ರೈತರಿಗೆ ಯಾವುದೇ ಆತಂಕ ಬೇಡ. ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಮೈ ಷುಗರ್ ಕಂಪನಿ ಬಂದ್ ಆಗದಂತೆ ಕಂಪನಿ ಪ್ರಾರಂಭ ಮಾಡಲಾ ಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಇರುವ ಇತರೆ ಸರ್ಕಾರಿ ಕಾರ್ಖಾನೆಗಳನ್ನೂ ಕೂಡ ಉಳಿಸಿಕೊಳ್ಳುವಲ್ಲಿ ಶ್ರಮಿಸುತ್ತೇನೆ ಎಂದು ಸಚಿವರು ಹೇಳಿದರು.

“ಸಕ್ಕರೆ ಕಾರ್ಖಾನೆ ಸಂಬಂಧ ಮುಖ್ಯಮಂತ್ರಿಗಳ ಆದೇಶದಂತೆ ಕಾರ್ಯನಿರ್ವಹಿಸಲು ಹಾಗೂ ಕಾರ್ಯನಿರ್ವಹಣೆಯಲ್ಲಿ ವಿಳಂಬವಾಗ ದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ನಡೆಸಲಾಗುವುದು. ಖಾಸಗೀಕರಣದ ವಿಚಾರವಾಗಿ ಮಂಡ್ಯದ ರೈತರು ಚಿಂತಿಸುವಂತಿಲ್ಲ ಎಂದರು.

ಸುಮಾರು ಮೂರು ವರ್ಷದಿಂದ ಕಾರ್ಖಾನೆಗೆ ಬೀಗ ಜಡಿಯಲಾಗಿದೆ. ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡಲು ರೈತರು ವಿರೋಧ ಮಾಡಿದ್ದರು. ಸರ್ಕಾರವೇ ಉಸ್ತುವಾರಿ ನೋಡಿಕೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರ ನಿಯೋಗದೊಂದಿಗೆ ಎಚ್. ಡಿ. ಕುಮಾರಸ್ವಾಮಿ ಯಡಿಯೂರಪ್ಪ ಭೇಟಿ ಮಾಡಿದ್ದರು. ಆಗ ಖಾಸಗಿಯವರಿಗೆ ನೀಡುವುದಿಲ್ಲ ಎಂಬ ಭರವಸೆ ಸಿಕ್ಕಿತ್ತು.

2008ರ ಬಳಿಕ ಸರ್ಕಾರಗಳು ಕಾರ್ಖಾನೆ ಪುನಶ್ಚೇತನಕ್ಕೆ 520 ಕೋಟಿ ಹಣ ನೀಡಿವೆ. ಆದರೂ ಸಹ ಕಾರ್ಖಾನೆ ಸುಮಾರು 400 ಕೋಟಿ ನಷ್ಟದಲ್ಲಿದೆ. ಈಗ ಹೊಸ ತಂತ್ರಜ್ಞಾನ ಬಳಕೆ ಮಾಡಿಕೊಂಡು ಕಾರ್ಖಾನೆ ಪುನಃ ಆರಂಭಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇದೆ.

error: Content is protected !!