ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಗಿರಿಧಾಮ(Nandi Giridhama) ದಲ್ಲಿ ಹೊಸ ವರ್ಷಾಚರಣೆಯನ್ನು ಸಂತೋಷದಿಂದ ಕಳೆಯಲಿ ಎನ್ನುವ ಕಾರಣಕ್ಕೆ 2025ರ ಜನವರಿ ೧ ಮದ್ಯರಾತ್ರಿ ೧೧ರವರೆಗೆ ಸಾರ್ವಜನಿಕ ನಿಷೇಧ ಹೇರಲಾಗಿದೆ.
ಹೊಸ ವರ್ಷಾಚರಣೆ ನೆಪದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಂದಿಗಿರಿಧಾಮಕ್ಕೆ ಪ್ರವಾಸಿಗರು ಆಗಮಿಸುವ ಹಿನ್ನೆಲೆ ಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ನಂದಿಗಿರಿಧಾಮಕ್ಕೆ ಡಿ.೩೧ ರ ಸಂಜೆ ೬ ಗಂಟೆಯಿಂದ ೨೦೨೫ರ ಜನವರಿ ೧ ರ ರಾತ್ರಿ ೧೧ ಗಂಟೆಯ ವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಾಜ್ಞೆಯನ್ನು ವಿಧಿಸಿದೆ.
ಜೊತೆಗೆ ಪ್ರವಾಸಿಗರಿಗೆ ಅತಿಥಿ ಗೃಹಗಳಲ್ಲಿ ಕೊಠಡಿಗಳ ಕಾಯ್ದಿರಿಸುವುದನ್ನು ಸಹ ರದ್ದುಗೊಳಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸ ಬೇಕು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.