ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯ ಮಾತುಗಳು ಮತ್ತೆ ಕೇಳಿಬರುತ್ತಿದ್ದು, ಇದೊಂದು ಕಪೋಲಕಲ್ಪಿತ ಸುದ್ದಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. 2023ರ ಚುನಾವಣೆವರೆಗೆ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಸರ್ಕಾರದಲ್ಲಿ ಅರಾಜಕತೆ ಹುಟ್ಟುಹಾಕಲು ಇಂತಹ ಸುದ್ದಿ ಹಬ್ಬಿಸಲಾಗುತ್ತಿದೆ ಎಂದರು.