Wednesday, 27th November 2024

ಜಿಲ್ಲೆಗೆ 10 ನಮ್ಮ ಕ್ಲಿನಿಕ್ ಮಂಜೂರು

ತುಮಕೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 10 ನಮ್ಮ ಕ್ಲಿನಿಕ್ ತೆರೆಯಲು ಸರಕಾರ ಮಂಜೂರಾತಿ ನೀಡಿದೆ.

ತುಮಕೂರು ನಗರದಲ್ಲಿ 7, ಮಧುಗಿರಿ, ಪಾವಗಡ ಹಾಗೂ ಚಿಕ್ಕನಾಯಕನಹಳ್ಳಿಯಲ್ಲಿ ತಲಾ 1 ಸೇರಿದಂತೆ ಒಟ್ಟು 10 ನಮ್ಮ ಕ್ಲಿನಿಕ್‌ಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ನಮ್ಮ ಕ್ಲಿನಿಕ್ ತೆರೆಯಲು ಆದಷ್ಟು ಸರಕಾರಿ ಕಟ್ಟಡಗಳನ್ನು ಆಯ್ಕೆ ಮಾಡಿ ಕೊಳ್ಳಬೇಕು. ಸರಕಾರಿ ಕಟ್ಟಡಗಳು ದೊರೆಯದಿದ್ದರೆ ಬಾಡಿಗೆ ಕಟ್ಟಡಗಳಲ್ಲಿ ಕ್ಲಿನಿಕ್  ತೆರೆಯಬೇಕು. ಸಮುದಾಯ ಭವನಗಳನ್ನೂ ಸಹ ಬಳಸಿಕೊಳ್ಳಬಹುದು.

ನಗರ ಪ್ರದೇಶದ ಸಮುದಾಯಕ್ಕೆ ಉತ್ತಮ ಗುಣಮಟ್ಟದ ಹಾಗೂ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ನಮ್ಮ ಕ್ಲಿನಿಕ್‌ಗಳನ್ನು ಸ್ಥಾಪಿಸ ಲಾಗುತ್ತಿದೆ. ಇದರಿಂದ ಜಿಲ್ಲಾಸ್ಪತ್ರೆಯಲ್ಲಿ ಜನಸಂದಣಿ ಕಡಿಮೆಯಾಗುತ್ತದ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ಜಿಪಂ ಸಿಇಓ ಡಾ: ಕೆ. ವಿದ್ಯಾಕುಮಾರಿ ಮಾತನಾಡಿ, ಕೊಳಚೆ ಪ್ರದೇಶ, ದುರ್ಬಲ ವರ್ಗದ ಜನರು ವಾಸಿಸುವ ಕಡೆ ನಮ್ಮ ಕ್ಲಿನಿಕ್ ತೆರೆದು, ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್ ಮಾತನಾಡಿ, ನಮ್ಮ ಕ್ಲಿನಿಕ್‌ನಲ್ಲಿ ಅಸಾಂಕ್ರಾಮಿಕ ರೋಗಗಳ ಸ್ಕಿçÃನಿಂಗ್ ಮತ್ತು ಕ್ಷೇಮ ಚಟುವಟಿಕೆಗಳು, ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧಿ, ಉಚಿತ ಪ್ರಯೋಗ ಶಾಲಾ ಸೇವೆ(ಕನಿಷ್ಟ 14 ರೀತಿಯ ಪ್ರಯೋಗ ಶಾಲಾ ಪರೀಕ್ಷೆ), ರೆಫರಲ್ ಸೇವೆಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಆರ್‌ಸಿಹೆಚ್ ಅಧಿಕಾರಿ ಡಾ: ಕೇಶವರಾಜ್ ಮಾತನಾಡಿ, ನಮ್ಮ ಕ್ಲಿನಿಕ್‌ನಲ್ಲಿ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸಲು ಪ್ರತಿ ಕ್ಲಿನಿಕ್‌ಗೆ ತಲಾ ಒಬ್ಬರು ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು/ಕಿರಿಯ ದರ್ಜೆ ಸಹಾಯಕರು ಹಾಗೂ ಡಿ-ದರ್ಜೆ ನೌಕರರನ್ನು ನೇಮಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಮೋಹನ್‌ದಾಸ್, ಪಾಲಿಕೆ ಆಯುಕ್ತೆ ರೇಣುಕಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎನ್. ಆಂಜಿನಪ್ಪ, ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಗಳು ಉಪಸ್ಥಿತರಿದ್ದರು.