Tuesday, 10th September 2024

ನಾಳೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದಲೇ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನೆಲೆ ಬೆಂಗಳೂರು ಸಮೀಪದ ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಏ.25ರ ಸಂಜೆ 6 ಗಂಟೆಯಿಂದ ಏ.26ರ ರಾತ್ರಿ 8 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಏ.26 ರಂದು ನಡೆಯಲಿರುವ ಮತದಾನ ದಲ್ಲಿ, ಮತದಾರರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂಬ ಉದ್ದೇಶದಿಂದ ಈ ಆದೇಶವನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೊರಡಿಸಿದ್ದಾರೆ. ಕೊಠಡಿಗಳ ಮುಂಗಡ ಬುಕ್ಕಿಂಗ್ ಕೂಡ ನಿಷೇಧ ವಿಧಿಸಿ ಆದೇಶಿಸಲಾಗಿದೆ.

ಶನಿವಾರ ಬೆಳಗ್ಗೆ ಪ್ರವಾಸಿಗರು ನಂದಿ ಬೆಟ್ಟಕ್ಕೆ ತೆರಳಬಹುದಾಗಿದೆ. ಮತದಾನದ ಹಿನ್ನೆಲೆ ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳು ರಜೆ ಸಹ ನೀಡಿವೆ. ಒಂದಿಷ್ಟು ಕಂಪನಿಗಳು ಮತದಾನ ಹಿನ್ನೆಲೆ ಆಗಮನ ಮತ್ತು ನಿರ್ಗಮನ ಸಮಯದಲ್ಲಿ ರಿಯಾಯ್ತಿಯನ್ನು ಘೋಷಿಸಿವೆ.

ಮತ್ತೊಂದೆಡೆ ಕೆಲ ಹೋಟೆಲ್​ಗಳು ಮತದಾನ ಮಾಡುವವರಿಗೆ ಉಚಿತ ದೋಸೆ, ಲಡ್ಡು ವಿತರಿಸುವ ನಿರ್ಣಯ ತೆಗೆದುಕೊಂಡಿವೆ.

ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು. ನಾವು ಅಧಿಕವಾಗಿ 20% ಸಿಬ್ಬಂದಿ ನೇಮಿಸಿಕೊಂಡಿ ರುತ್ತೇವೆ. ಮೆಡಿಕಲ್ ಎಮರ್ಜೆನ್ಸಿ ಸಮಯದಲ್ಲಿ ಬೇರೆ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ಪ್ರತಿ‌ ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಸಖಿ ಭೂತ್ ಇಡಲಾಗಿದೆ. ಒಟ್ಟು 140 ಸಖಿ ಬೂತ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಯೂತ್ ಬೂತ್ ಹಾಗೂ ವಿಕಲಾಂಗಚೇತನರಿಗೆ ಒಂದು ಬೂತ್​​ಗಳನ್ನು ನಿರ್ಮಾಣ ಮಾಡಲಾಗಿದೆ. 244 ವಿಶೇಷ ಮತಗಟ್ಟೆಗಳಿವೆ. ಪಾರ್ಕಿಂಗ್ ಹಾಗೂ ಕ್ಯೂ ಆಯಪ್ ಸಹ ಇದೆ.

ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಅಂದ್ರೆ ಮೇ 7ರಂದು ಚುನಾವಣೆ ನಡೆಯಲಿದೆ.

Leave a Reply

Your email address will not be published. Required fields are marked *