Monday, 14th October 2024

ನರೇಗಾ ಯೋಜನೆಯ ಕೂಲಿ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಲಿ

ಗುಬ್ಬಿ: ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ನರೇಗಾ ಯೋಜನೆಯ ಕೂಲಿ ಕಾರ್ಮಿ ಕರು ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಬಿದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಬಸವನಾಳ್ ತಿಳಿಸಿದರು.

ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು,  ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೇಂದ್ರ ಸರ್ಕಾರದ ಮಹತ್ವ ಕಾಂಕ್ಷಿ ಯೋಜನೆಯಾಗಿದ್ದು. ಈ ಯೋಜನೆಯ ಅಡಿಯಲ್ಲಿ ದುಡಿಯುವ ಕೂಲಿ ಕಾರ್ಮಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರವು ಗ್ರಾಮ ಆರೋಗ್ಯ ಅಮೃತ ಅಭಿಯಾನ ಎಂಬ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಎಲ್ಲಾ ನರೇಗಾ ಕೂಲಿ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನಾಗರಾಜ್ ಮಾತನಾಡಿ, ನರೇಗಾ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕರಿಗೆ ಕೂಲಿ ಮೊತ್ತ 309 ರೂಗಳಿಂದ 316 ರೂಗಳಿಗೆ ಹೆಚ್ಚಳವಾಗಿದ್ದು ಇದರ ಸದ್ಬಳಕೆಯನ್ನು ಮಾಡಿಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ಐ ಇ ಸಿ  ಸಂಯೋಜಕ ರಾಘವೇಂದ್ರ, ಪಂಚಾಯತಿ ಉಪಾಧ್ಯಕ್ಷ ಯತೀಶ್, ಸದಸ್ಯ ರಮೇಶ್, ಆರೋಗ್ಯ ಇಲಾಖೆ ಸಿಬ್ಬಂದಿ,  ಆಶಾ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.