ಗುಬ್ಬಿ: ಆರೋಗ್ಯದ ದೃಷ್ಠಿಯಿಂದ ಪ್ರತಿಯೊಬರ್ ಸಹ ಪರಿಸರದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಯೋಗೀಶ್ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಎಂ ಎನ್ ಕೋಟೆ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ಹಮ್ಮಿ ಕೊಂಡಿದ್ದ ಸ್ವಚ್ಚ ಹೀ ಸೇವಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೇ ನೀಡಿ ಮಾತನಾಡಿದ ಅವರು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟು ಕೊಂಡರೇ ಎಲ್ಲರೂ ಆರೋಗ್ಯವಾಗಿ ಇರಲು ಸಾಧ್ಯವಾಗುತ್ತದೆ.
ಪರಿಸರದ ಬಗ್ಗೆ ನಾವೆಲರೂ ಸಹ ಸಾರ್ವಜನಕರಿಗೆ ಜಾಗೃತಿ ಮೂಡಿಸಿದರೇ ಮಾತ್ರ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳಲು ಸಾಧ್ಯವಾಗುತ್ತದೆ. ದಿನ ನಿತ್ಯ ಉಪಯೋಗಿ ಸುವ ಪ್ಲಾಸ್ವಿಕ್ ನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಪರಿಸರದ ಈತ ದೃಷ್ಠಿ ಯಿಂದ ಪ್ಲಾಸ್ವಿಕ್ ನ್ನು ಸಂಪೂರ್ಣವಾಗಿ ನಾಶ ಮಾಡಬೇಕು ಕಸವನ್ನು ಎಲ್ಲದರಲ್ಲಿ ಬೀಸಡ ದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು.ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಪ್ಲಾಸ್ವಿಕ್ ಮುಕ್ತ ಗ್ರಾಮವನ್ನಾಗಿ ಮಾಡಲು ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದ ಅವರು ನಮ್ಮ ಗ್ರಾಮ ಪಂಚಾಯಿತಿಯನ್ನು ಸ್ವಚ್ಚ ಸುಂದರ ಹಾಗೂ ಆರೋಗ್ಯವಂತರಾಗಿ ಇರಲು ಪ್ರತಿಜ್ಞೆ ಮಾಡುತ್ತೇನೆ ಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ ಸಹಾಯಕ ನಿರ್ದೇಶಕ ಇಂದ್ರೇಶ್ , ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಪ್ಪ ,ಕಾಂತರಾಜು , ಸಿದ್ದ ಗಂಗಮ್ಮ ಕಲೇಶ್ , ಉಮಾ ತೇಜಯ್ಯ , ಪಿಡಿಓ ಕೃಷ್ಣಮೂರ್ತಿ , ಮಂಜುನಾಥ್ , ಕಾರ್ಯದರ್ಶಿ ರಾಮಾಂಜಿನಪ್ಪ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.