Saturday, 27th July 2024

ಚಳಗೇರಿ ಗ್ರಾಮಕ್ಕೆ ನವೀನ್ ಮೃತದೇಹ ಆಗಮನ: ಕುಟುಂಬಸ್ಥರ ಆಕ್ರಂದನ

ಹಾವೇರಿ: ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭ ಮೃತಪಟ್ಟ ಹಾವೇರಿಯ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹ ಹಾವೇರಿ ಜಿಲ್ಲೆಯ ಚಳಗೇರಿ ತಲುಪಿದೆ. ನವೀನ್ ಮೃತದೇಹ ನೋಡುತ್ತಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸೋಮವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನವೀನ್ ಮೃತ ದೇಹ ಆಗಮಿಸಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರರು ಅಂತಿಮ ನಮನ ಸಲ್ಲಿಸಿದ ಬಳಿಕ ಹಾವೇರಿಗೆ ಕಳಿಸಿಕೊಡ ಲಾಯಿತು.

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೇರಿ ಗ್ರಾಮಕ್ಕೆ ನವೀನ್ ಮೃತದೇಹ ಆಗಮಿಸು ತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಕುಟುಂಬದವರು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪೂಜೆ ಸಲ್ಲಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಲವು ಸಚಿವರು ನವೀನ್ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಕೆ ಮಾಡಲು ಆಗಮಿಸಲಿದ್ದಾರೆ.

ಉಕ್ರೇನ್ ಸುತ್ತಲಿನ ಎಲ್ಲಾ ದೇಶಗಳ ಸಂಪರ್ಕವನ್ನು ಬೆಳೆಸಿ ರಾಜತಾಂತ್ರಿಕವಾಗಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ನವೀನ್ ವೈದ್ಯಕೀಯ ಶಿಕ್ಷಣ ಮುಗಿಸಿ ಹಿಂದಿರುಗುವ ವೇಳೆಗೆ ಅವನ ತಂದೆತಾಯಿಗಳು ಬರಮಾಡಿಕೊಳ್ಳಬೇಕಿತ್ತು. ಆದರೆ ನವೀನ್ ಮೃತದೇಹವನ್ನು ಬರಮಾಡಿಕೊಳ್ಳಬೇಕಿರು ವುದು ಅತ್ಯಂತ ನೋವಿನ ಸಂಗತಿ” ಎಂದರು.

 

error: Content is protected !!