Friday, 13th December 2024

New DHO: ನೂತನ ಡಿಎಚ್ಒ ಚಂದ್ರಶೇಖರ್

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಮಲೇರಿಯಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಚಂದ್ರಶೇಖರ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನಾಗಿ ಸರಕಾರ ನೇಮಿಸಿದೆ.

ಹಿಂದೆ ಡಿಎಚ್ಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ಯಾವುದೇ ಸ್ಥಳ ತೋರಿಸಿಲ್ಲ. ಕೊರಟಗೆರೆಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಯಾಗಿದ್ದ ಡಾ.ಮೋಹನದಾಸ್ ಅವರನ್ನು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.