ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ಮನೆ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.
ಭಾರತದಲ್ಲಿ ಭಯೋತ್ಪಾದನೆಗೆ ಹವಾಲಾ ಫಂಡಿಂಗ್, ಭಯೋತ್ಪಾದಕ ಕೃತ್ಯಕ್ಕೆ ಗಲ್ಪ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ದೇಶದಲ್ಲಿ ಕೋಮುಗಲಭೆ ಸೃಷ್ಟಿ ಯತ್ನ ಆರೋಪದ ತನಿಖೆ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಎನ್‌ಐಎ ದಾಳಿ ಮಾಡಿದೆ.