ಶಿರಸಿ ತಾಲೂಕಿನ ಟಿಪ್ಪು ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ಐಎ ಹಾಗೂ ಐಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯಲ್ಲಿ ಎಸ್ಡಿಪಿಐ ಮುಖಂಡ ಹಝೀಝ್ ಅಬ್ದುಲ್ ಶುಕುರ್ ಹೊನ್ನಾವರ್ (45) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಬೆಳಗ್ಗೆ ಅಝೀಝ್ ಅಬ್ದುಲ್ ಮನೆ ಸುತ್ತ ಪೊಲೀಸರು ನೆರೆದಿದ್ದರು.
ಸುಮಾರು 6 ಗಂಟೆ ವೇಳೆಗೆ ಅಝೀಝ್ ಅಬ್ದುಲ್ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ತಂಡ ಒಂದು ಲ್ಯಾಪ್ಟಾಪ್, 2 ಮೊಬೈಲ್, ಪುಸ್ತಕ ಹಾಗೂ ಒಂದು ಸಿಡಿ ವಶಪಡಿಸಿ ಕೊಂಡಿದೆ.
ಅಝೀಝ್ ಹೆಂಡತಿ ಹಾಗೂ ಮೂರು ಮಕ್ಕಳನ್ನು ಹೊಂದಿದ್ದಾನೆ. ಅಝೀಝ್ ಸಹೋದರ ಮೌಸಿನ್ ಅಬ್ದುಲ್ ಶುಕುರ್ ಹೊನ್ನಾವರ ಎಸ್ಡಿಪಿಐ ಪ್ರಾಂತೀಯ ಅಧ್ಯಕ್ಷನಾಗಿದ್ದು, ಆತನನ್ನು ವಶಕ್ಕೆ ಪಡೆಯಲು ಯೋಜನೆ ಹಾಕಲಾಗಿತ್ತು.