Thursday, 25th July 2024

ದಾವಣಗೆರೆಯಲ್ಲಿ ಇಂದಿನಿಂದ ರಾತ್ರಿ ಕರ್ಪ್ಯೂ ಜಾರಿ

ದಾವಣಗೆರೆ : ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ, ಜಿಲ್ಲೆಯಾದ್ಯಂತ ಆ.16ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.

ದಾವಣಗೆರೆ ಜಿಲ್ಲಾಧಿಕಾರಿಗಳು ಈ ಕುರಿತಂತೆ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡು ಬಂದ ಹಿನ್ನಲೆ ಯಲ್ಲಿ, ನಿಯಂತ್ರಣ ಕ್ರಮವಾಗಿ ನೈಟ್ ಕರ್ಪ್ಯೂ ಜಾರಿಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.

ಇಂದಿನಿಂದ ಜಿಲ್ಲೆಯಾದ್ಯಂತ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿ ಇರಲಿದೆ. ತುರ್ತು ಸಂದರ್ಭದಲ್ಲಿ ಮಾತ್ರವೇ ಸಾರ್ವಜನಿ ಕರ ಓಡಾಟಕ್ಕೆ ಅವಕಾಶ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!