Thursday, 21st November 2024

Nikhil Kumaraswamy: ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿ

ಸರ್ಕಾರದ ಹಗರಣಗಳನ್ನು ಮುಚ್ಚಿಕೊಳ್ಳಲು ರಾಜ್ಯದಲ್ಲಿ ಗಲಾಟೆ ನಡೆಯುತ್ತಿದೆ

ಚನ್ನಪಟ್ಟಣದಲ್ಲಿ NDA ಅಭ್ಯರ್ಥಿ ಕಣಕ್ಕೆ

ಮೈಸೂರು : ರಾಜ್ಯದಲ್ಲಿ ಮೂರು ಉಪಚುನಾವಣೆಗಳು ನಡೆಯುತ್ತವೆ. ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಜೊತೆ ಯಲ್ಲಿ ಸ್ಥಳೀಯ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯತಿ ಚುನಾವಣೆಗಳು ಅತೀ ಶೀಘ್ರದಲ್ಲಿ ಬರುತ್ತೆ ಅದಕ್ಕೆ ಸಜ್ಜಾಗಿ ನಾವು ಪೂರ್ವ ಸಿದ್ಧತೆಗಳು ಮಾಡುತ್ತಿದ್ದೇವೆ ಎಂದರು.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಗಣೇಶ ಗಲಾಟೆಗಳು ಜಾಸ್ತಿ ಆಗುತ್ತಿರುವ ವಿಚಾರ ಕ್ಕೆ ಮಾತನಾಡಿದ ಅವರು; ರಾಜ್ಯದಲ್ಲಿ ಲಾ ಅಂಡ್ ಆರ್ಡರ್ ಹಾಗೂ ಗುಪ್ತಚರ ಇಲಾಖೆ ಸಂಪೂರ್ಣ ವಿಫಲ ವಾಗಿದೆ. ಒಂದು ಸಮುದಾಯದ ಓಲೈಕೆಗಾಗಿ ಇನ್ನೊಂದು ಸಮುದಾಯವನ್ನು ಕೈ ಬಿಟ್ಟಿದ್ದಾರೆ. ಮಂಡ್ಯದ ಜನ ಪ್ರಭುದ್ದರಿದ್ದಾರೆ. ಎಲ್ಲವನ್ನೂ ಗಮನಿಸುತ್ತಾ ಇದ್ದಾರೆ ರಾಜ್ಯ ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಅಂತ ಗೊತ್ತಾಗುತ್ತಿದೆ. ಸರ್ಕಾರ ಹಗರಣದಲ್ಲಿ ನಿರತವಾಗಿದೆ. ಅದನ್ನು ಮುಚ್ಚಿಕೊಳ್ಳಲು ಈ ರೀತಿಯ ಗಲಾಟೆ ಮಾಡಿಸು ತ್ತಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಚನ್ನಪಟ್ಟಣದಲ್ಲಿ NDA ಅಭ್ಯರ್ಥಿ ಕಣಕ್ಕೆ

ಚನ್ನಪಟ್ಟಣ ಬೈ ಎಲೆಕ್ಷನ್ ವಿಚಾರ ಮಾತನಾಡಿದ ಅವರು, ಈಗಾಗಲೇ ಸಿಪಿ ಯೋಗೇಶ್ವರ್ ಕೂಡ ಸಭೆಗಳನ್ನು ಮಾಡುತ್ತಿದ್ದಾರೆ. ನಾವು ಕೂಡ ನಮ್ಮ ಕಾರ್ಯಕರ್ತರ ಜೊತೆ ಸಭೆ ಮಾಡುತ್ತಿದ್ದೇವೆ. ಒಟ್ಟಾರೆಯಾಗಿ ಎನ್.ಡಿ.ಎ ಅಭ್ಯರ್ಥಿ ಕಣಕ್ಕಿಳಿತ್ತಾರೆ. ನಾನು ನಿಲ್ಲುತ್ತೇನೆ ಇನ್ಯಾರೋ ನಿಲ್ಲುತ್ತಾರೆ ಸದ್ಯಕ್ಕೆ ಆ ಪ್ರಶ್ನೆ ಇಲ್ಲ. ಇನ್ನು ಚುನಾವಣೆ ದಿನಾಂಕ ಪ್ರಕಟ ಆಗಿಲ್ಲ ಕಾರ್ಯಕರ್ತರ ಭಾವನೆಗೆ ತಕ್ಕಂತೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ದ್ವೇಷ ರಾಜಕಾರಣ ಮಾಡುತ್ತಿದೆ

ಶಾಸಕ ಮುನಿರತ್ನ ಜಾತಿ ನಿಂದನೆ ಪ್ರಕರಣಕ್ಕೆ ಮಾತನಾಡಿದ ಅವರು, ತನಿಖೆ ನಡೆಯುತ್ತಿದೆ. FSL ವರದಿ ಬರಬೇಕಿದೆ. ಬಂದ ನಂತರ ಸತ್ಯಾಸತ್ಯತೆ ಹೊರ ಬರತ್ತೆ. ರಾಜ್ಯ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಪಿಎಸ್ಐ ಪರಶು ರಾಮ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯ ಸರ್ಕಾರ ಯಾವ ರೀತಿ ಕ್ರಮ ಜರುಗಿಸಿದೆ ನೋಡಿದ್ದೇವೆ ಎಂದು ನಿಖಿಲ್ ಕುಮಾರಸ್ವಾಮಿ ಸರ್ಕಾರದ ಕಾರ್ಯ ವೈಖರಿ ವಿರುದ್ಧ ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ವಿಚಾರ ಪ್ರಕರಣ ಕೋರ್ಟ್ ನಲ್ಲಿದೆ ಕೋರ್ಟ್ ತೀರ್ಪು ಕಾಯ್ದಿರಿ ಸಿದೆ. ಸದ್ಯಕ್ಕೆ ಆ ಬಗ್ಗೆ ಮಾತನಾಡಲ್ಲ ಎಂದರು.

ಪಕ್ಷದ ವರಿಷ್ಠರು ದೇವೇಗೌಡರು ಮತ್ತು ಕುಮಾರಣ್ಣನ ಸೂಚನೆ ಮೇರೆಗೆ. ರಾಜ್ಯದ 31 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸದಸ್ಯತ್ವ ನೊಂದಣಿ ಹಾಗೂ ಪಕ್ಷದ ಬಲವರ್ಧನೆ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: Nikhil Kumaraswamy: ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್‌-ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ: ನಿಖಿಲ್