Friday, 1st December 2023

ನಾಳೆಯಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 5ರಿಂದ ಭಕ್ತರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಅ.6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆ ಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಅ.7ರಂದು ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸವ ಉದ್ಘಾಟನೆಗೊಳ್ಳಲಿದೆ. ಮಾಜಿ ಸಿಎಂ ಎಸ್.ಎಂ. ಕೃಷ್ಣರವರು ಈ ಬಾರಿಯ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಿದ್ದಾರೆ.

ಹೀಗಾಗಿ ಅ.5ರಂದು ಬೆಳಗಿನ ಜಾವ 4 ಗಂಟೆಯಿಂದ ಅ.7ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ. ಧಾರ್ಮಿಕ ಪೂಜಾ ವಿಧಿ ವಿಧಾನಗಳು ಎಂದಿನಂತೆ ನಡೆಯಲಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ತುರ್ತು ಸೇವಾ ವಾಹನಗಳು ಹಾಗೂ ಚಾಮುಂಡಿ ಬೆಟ್ಟದ ಸುತ್ತ ಲಿನ ಗ್ರಾಮಸ್ಥರನ್ನು ಹೊರತುಪಡಿಸಿ ಎಲ್ಲರಿಗೂ ನಿರ್ಬಂಧ ಹೇರಿ ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!