Friday, 22nd November 2024

Minister Lakshmi Hebbalkar: ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತುಮಕೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ನಗರದ ಬಾಲಭವನ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಮ್ಮ ಸರ್ಕಾರ ಶಿಸ್ತಿನ ಸರ್ಕಾರ. ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಉತ್ತಮ ಆಡಳಿತ ನೀಡುತ್ತಿದ್ದು, ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ನಾಯಕನ ಬದಲಾವಣೆ ಇಲ್ಲವೆಂದು ಸ್ಪಷ್ಟಪಡಿಸಿದರು.
ಇದುವರೆಗೂ ಒಂದೇ ಒಂದು ಗೃಹಲಕ್ಷ್ಮೀ ಖಾತೆ ಡಿಲೀಟ್ ಆಗಿಲ್ಲ. ಜಿಎಸ್‌ಟಿ, ಆದಾಯ ತೆರಿಗೆ ಪಾವತಿ ಮಾಡುವ ಫಲಾನುಭವಿಗಳಿಗೆ ಗೃಹಲಕ್ಷಿö್ಮ ಯೋಜನೆಯಡಿ ಸೌಲಭ್ಯ ನೀಡಲು ಅವಕಾಶವಿಲ್ಲವಾದ್ದರಿಂದ ನೋಂದಣಿ ಸಂದರ್ಭದಲ್ಲಿಯೇ ಅಂತಹವರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ನೋಂದಣಿಯಾದ ಬಳಿಕ ಡಿಲೀಟ್ ಮಾಡಲಾಗಿಲ್ಲ, ಎಲ್ಲಾ ಜಿಲ್ಲೆಗಳಿಗೂ ಗೃಹಲಕ್ಷಿö್ಮ ಖಾತೆಯ 11ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಶೀಘ್ರವೇ 12 ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುವುದೆಂದು ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಪಾವತಿ ಮಾಡಲಾಗುತ್ತಿದ್ದು, ವೇತನ ಪಾವತಿ ವಿಳಂಬ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ ಸರ್ಕಾರ ದಿಂದ ಅನುದಾನ ಬಿಡುಗಡೆ ಮಾಡಿದಾಗ ರಾಜ್ಯ ಸರ್ಕಾರದ ಮೊತ್ತ ಸೇರಿಸಿ ವೇತನ ನೀಡಲಾಗುತ್ತಿದ್ದು, ಕೇಂದ್ರದಿAದ ಹಣ ಇನ್ನೂ ಬಂದಿಲ್ಲದೆ ಇರುವುದರಿಂದ ವೇತನ ಪಾವತಿ ವಿಳಂಬವಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ವೇತನಕ್ಕೆ ಸಂಬAಧಿಸಿದAತೆ ಈಗಾಗಲೇ ಕೇಂದ್ರಕ್ಕೆ ಮರ‍್ನಾಲ್ಕು ಬಾರಿ ಪತ್ರ ಬರೆಯಲಾಗಿದೆ. ಗಣಪತಿ ಹಬ್ಬದೊಳಗೆ ವೇತನ ನೀಡಲು ಪ್ರಯತ್ನಿಸಲಾಗುವುದು ಎಂದರು.