Sunday, 15th December 2024

ಬಿಎಸ್ ಯಡಿಯೂರಪ್ಪರಿಗೆ ಜಾಮೀನು ರಹಿತ ವಾರಂಟ್ ಜಾರಿ

ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿರುವುದಾಗಿ ವರದಿಯಾಗಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ.

ಮತ್ತೊಂದೆಡೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಐಡಿ ಪೊಲೀಸರು ಪೋಕ್ಸೋ ಕೇಸ್ ನಲ್ಲಿ ಅಗತ್ಯ ಬಿದ್ದರೇ ಯಾವುದೇ ಸಂದರ್ಭದಲ್ಲಿ ಬಂಧಿಸಬಹುದು ಎಂದು ತಿಳಿಸಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಯಡಿಯೂರಪ್ಪಗೆ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ.