ಬೆಂಗಳೂರು: ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾಗುವ ಸರ್ಕಾರಿ ಕಟ್ಟಡ, ಪಾರ್ಕ್, ರಸ್ತೆ ಮತ್ತಿತರ ಸ್ಥಳಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರುಗಳು ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಶಾಸಕರಾದ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ, ದಾವಣಗೆರೆ ಜಿಲ್ಲಾಧಿಕಾರಿ, ದಾವಣಗೆರೆ ನಗರಸಭೆ, ದಾವಣಗೆರೆ ಜಿಲ್ಲಾ ಪಂಚಾ ಯಿತಿಗೆ ಸಹ ಹೈಕೋರ್ಟ್ ನೋಟಿಸ್ ಜಾರಿಗೆ ಆದೇಶಿಸಿತು.
ಇಬ್ಬರು ಡ್ರಗ್ ಪೆಡ್ಲರ್‌ಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ ದಾವಣಗೆರೆ ನಿವಾಸಿ ವಕೀಲ ಎ. ಸಿ. ರಾಘವೇಂದ್ರ, ಸರ್ಕಾರದ ಅನುದಾನದಲ್ಲಿ ಕಟ್ಟಲಾಗಿರುವ ಕಟ್ಟಡಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರು ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.ಜಾತಿ ಗಣತಿ ವರದಿ; ಪ್ರಮಾಣ ಪತ್ರ ಸಲ್ಲಿಸಿ ಎಂದ ಹೈಕೋರ್ಟ್ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮೇ 29ಕ್ಕೆ ಮುಂದೂಡಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಸರ್ಕಾರದ ಅನುದಾನಲ್ಲಿ ಕಟ್ಟಲಾದ ಸರ್ಕಾರಿ ಕಟ್ಟಡಗಳಿಗೆ ಜೀವಂತ ರಾಜಕಾರಣಿಗಳ ಹೆಸರು ಇಡಬಾರದು ಎಂದು 2012ರಲ್ಲಿ ಇದೇ ಹೈಕೋರ್ಟ್ ಆದೇಶವೊಂದನ್ನು ನೀಡಿದೆ.ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್ ನಕಾರ ಈ ರೀತಿ ಹೈಕೋರ್ಟ್ 2012ರಲ್ಲಿ ನೀಡಿದ ಆದೇಶ ಆಧರಿಸಿ ಹಾಗೂ ಅರ್ಜಿದಾರರು 2023ರ ಜುಲೈ 25ರಂದು ಸಲ್ಲಿಸಿರುವ ಮನವಿಯಂತೆ ಸರ್ಕಾರದ ಅನುದಾನ ದಲ್ಲಿ ಕಟ್ಟಲಾಗಿರುವ ಕಟ್ಟಡಗಳಿಗೆ ಇನ್ನೂ ಜೀವಂತವಾಗಿರುವ ರಾಜಕಾರಣಿಗಳಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್.ಮಲ್ಲಿಕಾರ್ಜುನ ಅವರ ಹೆಸರು ಇಟ್ಟಿರುವುದನ್ನು ತೆರವುಗೊಳಿಸಲು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು. ಅದೇ ರೀತಿ ದಾವಣ ಗೆರೆಯಲ್ಲಿ ಸರ್ಕಾರದ ಅನುದಾನದಲ್ಲಿ ಕಟ್ಟಲಾದ ಅನೇಕ ಕಟ್ಟಡಗಳು, ಪಾರ್ಕ್, ಬಸ್ ನಿಲ್ದಾಣ, ರಸ್ತೆಗಳಿಗೆ ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ ಅವರ ಹೆಸರಗಳನ್ನು ಇಡಲಾಗಿದೆ.