ಬೆಂಗಳೂರು: ಕರೂರು ವೈಶ್ಯ ಬ್ಯಾಂಕ್ನ ನಿವೃತ್ತ ಅಧ್ಯಕ್ಷ ಎನ್.ಎಸ್.ಶ್ರೀನಾಥ್( 73) ಶುಕ್ರವಾರ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.
ಕುಟುಂಬದವರು ಶ್ರೀನಾಥ್ ಅವರ ದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾನ ಮಾಡಿದ್ದಾರೆ. 1970ರಲ್ಲಿ ಕೆನರಾ ಬ್ಯಾಂಕ್ನಲ್ಲಿ ವೃತ್ತಿ ಆರಂಭಿಸಿದ್ದ ಇವರು, 2006ರಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಬಡ್ತಿ ಪಡೆದಿದ್ದರು. 2009ರಲ್ಲಿ ಕೇಂದ್ರ ಸರ್ಕಾರ,ಬ್ಯಾಂಕ್ ಆಫ್ ಬರೋಡಾಗೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಿತ್ತು.
ನಂತರ, ಕರೂರು ವೈಶ್ಯ ಬ್ಯಾಂಕ್ನ ನಿರ್ದೆಶಕ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ 40 ವರ್ಷ ಅನುಭವ ಹೊಂದಿದ್ದರು.
ಮುಂಬೈ, ಬೆಂಗಳೂರು, ಚೆನ್ನೈ, ಕರೂರು, ಮೈಸೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಕೆಲಸ ಮಾಡಿದ್ದರು. ಮಾನವ ಸಂಪನ್ಮೂಲ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ನೈಪುಣ್ಯತೆ ಹೊಂದಿದ್ದರು. ಕೆನರಾ ಬ್ಯಾಂಕ್ ಉದ್ಯೋಗಿಗಳ ಕನ್ನಡ ಸಂಘ ಸೇರಿ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.