Thursday, 19th September 2024

ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಎನ್‌ಎಸ್‌ಯುಐ ಕಾರ್ಯಕರ್ತರ ಪ್ರತಿಭಟನೆ

ಚಿಕ್ಕಬಳ್ಳಾಪುರ: ಪದವಿ ಕಾಲೇಜು ವಿದ್ಯಾರ್ಥಿಗಳು ದಾಖಲಾತಿ, ಪರೀಕ್ಷೆ, ಅಂಕಪಟ್ಟಿ, ಫಲಿತಾಂಶ, ವಸತಿ, ಸೇರಿದಂತೆ ಹತ್ತಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದರೂ ರಾಜ್ಯ ಸರ್ಕಾರ, ವಿಶ್ವವಿದ್ಯಾಲಯಗಳು ಅವುಗಳ ಪರಿಹಾರಕ್ಕೆ ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಎಸ್‌ಎಸ್‌ಯುಐ ಕಾರ್ಯಕರ್ತರು ನಗರದ ಶಿಡ್ಲಘಟ್ಟ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಎಂ.ಜಿ ರಸ್ತೆಯ ಜೈ ಭೀಮ್ ಹಾಸ್ಟೆಲ್ ನಿಂದ ಶಿಡ್ಲಘಟ್ಟ ವೃತ್ತದವರೆಗೂ ಪ್ರತಿಭ ಟನಾ ಮೆರವಣಿಗೆ ನಡೆಸಿದರು. ಶಿಡ್ಲಘಟ್ಟ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.

ಈ ವೇಳೆ  ಮಾತನಾಡಿದ ಎನ್‌ಎಸ್‌ಯುಐ  ಜಿಲ್ಲಾಧ್ಯಕ್ಷ ಚಂದ್ರಶೇಖರ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ಪಾಸ್ ನೀಡಬೇಕು. ಪರೀಕ್ಷೆಗಳ ಫಲಿತಾಂಶ ವಿಳಂಬವಾಗುತ್ತಿದೆ ಇದ ರಿಂದಾಗಿ ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳಿಗೆ ಅನಾನು ಕೂಲವಾಗು ತ್ತಿದೆ. ಸಕಾಲಕ್ಕೆ ಫಲಿತಾಂಶ ನೀಡಬೇಕು. ವಿದ್ಯಾರ್ಥಿ ವೇತನದ ಸಮಸ್ಯೆ ಪರಿಹರಿಸಬೇಕು. ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡಿದ್ದು ಕೂಡಲೇ ವಾಪಸ್ ಪಡೆಯಬೇಕು ಎಂದು ಪ್ರತಿಭಟನಕಾರರು ಸರಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟಿಸಿದರು.

ಬಾಗೇಪಲ್ಲಿ ಘಟಕದ ಅಧ್ಯಕ್ಷ ಅಂಬರೀಶ್ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸರ್ಕಾರ ಕೂಡಲೇ  ಪರಿಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಹೇಳಿದರು.

ಸಂಘಟನೆ ಉಪಾಧ್ಯಕ್ಷ ಪ್ರಭಾಕರ್,  ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಅರವಿಂದ್, ಚಿಂತಾಮಣಿ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಲ್.ಚಂದ್ರಶೇಖರ್, ಸುನಿಲ್ ಕುಮಾರ್, ವೇಣು ,ಕಾರ್ತಿಕ್, ಅಖಿಲ್ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read E-Paper click here