ಮಂಗಳೂರು: ಮಂಗಳೂರಿನಲ್ಲಿ ಮರ ಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಗ್ರಾಮದಲ್ಲಿ ನಡೆದಿದೆ.
ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತ ದುರ್ದೈವಿ.
ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ ತರಲು ತೆರಳಿದ್ದರು. ಈ ವೇಳೆ ಏಕಾಏಕಿ ಗಾಳಿ ಮಳೆ ಆರಂಭವಾಗಿದ್ದು, ಗಾಳಿ ಮಳೆಯಿಂದ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೀನಾಕ್ಷಿ ಬಸವನಮೂಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.