Sunday, 15th December 2024

ವಿಪಕ್ಷ ನಾಯಕನ ಹೆಸರು ಪ್ರಕಟಿಸಲು ಮುಹೂರ್ತ ಫಿಕ್ಸ್.!

ಹುಬ್ಬಳ್ಳಿ: ಕೊನೆಗೂ ವಿಪಕ್ಷ ನಾಯಕನ ಹೆಸರು ಪ್ರಕಟಿಸಲು ಬಿಜೆಪಿಯಿಂದ ಮುಹೂರ್ತ ಫಿಕ್ಸ್ ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ವಿಪಕ್ಷ ನಾಯಕನ ಸ್ಥಾನ ಜುಲೈ 18 ರ ನಂತರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ. ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗುವುದು ಕೇವಲ ಊಹಾಪೋಹ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಬರುತ್ತಾರೆ‌. ಗೃಹ ಲಕ್ಷ್ಮಿ ಈಗಾಗಲೇ ಯಡ ವಟ್ಟಾಗಿದೆ. ದಿನಾಂಕದ ಮೇಲೆ ದಿನಾಂಕ ಮುಂದೂಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಗಳಿಗೆ ಯಾವುದೇ ನಿರ್ಧಿಷ್ಟವಾದ ನಿಯಮ ಗಳನ್ನ ಮಾಡುತ್ತಿಲ್ಲ.

ತಾಯಂದಿರಿಗೆ, ರಾಜ್ಯದ ಹೆಣ್ಣುಮಕ್ಕಳಿಗೆ ಭ್ರಮನಿರಸನ ಮಾಡುವಂತಹ ಉದ್ದೇಶ ಈ ಯೋಜನೆ ಹಿಂದಿದೆ‌. ಅಧಿವೇಶನದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿವೆ ಎಂದು ಬೊಮ್ಮಾಯಿ ಹೇಳಿದರು.