Saturday, 30th November 2024

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನುದಾನಿತ ಸಂಸ್ಥೆ ನೌಕರರು ಪಾದಯಾತ್ರೆ

ತುಮಕೂರು:  ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ನಿಶ್ಚಿತ ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಗರದ ಸಿದ್ಧಗಂಗಾ ಮಠದಿಂದ ಬೆಂಗಳೂರಿಗೆ ಫ್ರೀಡಂ ಪಾರ್ಕ್ ವರೆಗೆ ಪಾದಯಾತ್ರೆ ಆರಂಭಿ ಸಿತು.
ಸಿದ್ದಗಂಗಾ ಮಠದಲ್ಲಿ ನೂರಾರು ಸಂಖ್ಯೆಯಲ್ಲಿ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಜಮಾಯಿಸಿ ನಿಶ್ಚಿತ ಪಿಂಚಣಿ ನೀಡುವಂತೆ ಸರಕಾರವನ್ನು ಒತ್ತಾಯಿಸುವ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಕೈಗೊಂಡರು.
ಸಂಘದ ರಾಜ್ಯಾಧ್ಯಕ್ಷ ಜಿ. ಹನುಮಂತಪ್ಪ ಮಾತನಾಡಿ, ದಿನಾಂಕ: 01-04-2006 ನಂತರ ನೇಮಕಗೊಂಡ ಅನುದಾನಿತ ನೌಕರರಿಗೆ ಎನ್.ಪಿ.ಎಸ್. ಯೋಜನೆಯ ಆಡಳಿತ ಮಂಡಳಿಯ ವಂತಿಗೆಯನ್ನು ಸರ್ಕಾರವೇ ಭರಿಸುವ ಜತೆಗೆ ಕಾಲ್ಪನಿಕ ವೇತನ ಜಾರಿ ಗೊಳಿಸಬೇಕು.
01-04-2006 ಕ್ಕೂ ಮೊದಲು ನೇಮಕವಾಗಿ ನಂತರ ಅನುದಾನ ಕ್ಕೊಳಪಟ್ಟ ನೌಕರರ ಅನುದಾನರಹಿತ ಅವಧಿ ಸೇವೆ ಪರಿಗಣಿಸಿ “ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ” ನೀಡಬೇಕು ಹಾಗೂ ಸರ್ಕಾರಿ ನೌಕರರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಮತ್ತಿತರ ವೈದ್ಯಕೀಯ ಸೌಲಭ್ಯಗಳನ್ನು ತಾರತಮ್ಯ ಇಲ್ಲದೆ ಅನುದಾನಿತ ನೌಕರರಿಗೂ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ದಿನಾಂಕ:01-04-2006ರ ನಂತರ ನೇಮಕ ಹೊಂದಿ ವೇತನ ಪಡೆಯುತ್ತಿರುವ ಹಾಗೂ ಮೊದಲೇ ನೇಮಕಗೊಂಡು ನಂತರ ಅನುದಾನಕ್ಕೊಳಪಟ್ಟು ವೇತನ ಪಡೆಯುತ್ತಿರುವ ನೌಕರರಿಗೆ ಯಾವುದೇ ವಿಧದ ಪಿಂಚಣಿ ಸೌಲಭ್ಯ (ಎನ್.ಪಿ.ಎಸ್ ಅಥವಾ ಓ.ಪಿ.ಎಸ್) ಇರುವುದಿಲ್ಲ. ಪಿಂಚಣಿ ಸೌಲಭ್ಯ ದೊರೆಯದೆ ಈಗಾಗಲೇ ಸುಮಾರು 3000ಕ್ಕೂ ಹೆಚ್ಚು ನೌಕರರು ಕೊನೆಯ ತಿಂಗಳ ಸಂಬಳ ಮಾತ್ರ ಪಡೆದು ಬರಿಗೈಯಲ್ಲಿ ನಿವೃತ್ತಿಯಾಗಿದ್ದಾರೆ ಎಂದರು.
ರಾಜ್ಯದ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ದಿನಾಂಕ:01-04-2006ರ ನಂತರ ನೇಮಕ ಹೊಂದಿ ವೇತನ ಪಡೆಯುತ್ತಿರುವ ಹಾಗೂ ಮೊದಲೇ ನೇಮಕಗೊಂಡು ನಂತರ ಅನುದಾನಕ್ಕೊಳಪಟ್ಟು ವೇತನ ಪಡೆಯುತ್ತಿರುವ ನೌಕರರಿಗೆ ಯಾವುದೇ ವಿಧದ ಪಿಂಚಣಿ ಸೌಲಭ್ಯ (ಎನ್.ಪಿ.ಎಸ್ ಅಥವಾ ಓ.ಪಿ.ಎಸ್) ಇಲ್ಲ. ಪಿಂಚಣಿ ಸೌಲಭ್ಯ ದೊರೆಯದೆ ಈಗಾಗಲೇ ಸುಮಾರು 3000ಕ್ಕೂ ಹೆಚ್ಚು ನೌಕರರು ಕೊನೆಯ ತಿಂಗಳ ಸಂಬಳ ಮಾತ್ರ ಪಡೆದು ಬರಿಗೈಯಲ್ಲಿ ನಿವೃತ್ತಿಯಾಗಿದ್ದಾರೆ. ಅನೇಕರು ಸೇವೆಯಲ್ಲಿರುವಾಗಲೇ ಅಕಾಲಿಕವಾಗಿ ಮರಣ ಹೊಂದಿದ್ದಾರೆ, ಇವರ ಕುಟುಂಬಗಳಿಗೆ ಯಾವುದೇ ಆರ್ಥಿಕ ಸೌಲಭ್ಯ ದೊರೆತಿಲ್ಲ. ಆದ್ದರಿಂದ ರಾಜ್ಯ ಸರ್ಕಾರಿ ನೌಕರರಿಗೆ ನೀಡುವಂತೆ ಪಿಂಚಣಿ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಬೇಕು ಎಂದು ಪಾದಯಾತ್ರಿ ನೌಕರರು ಒತ್ತಾಯಿಸಿದರು.
ಪಾದಯಾತ್ರೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಹನುಮೇಶ್ ಆರ್., ಉಪಾಧ್ಯಕ್ಷರಾದ ಪಿ.ಡಿ. ರವಿ, ಪ್ರಚಾರ ಸಮಿತಿ ಅಧ್ಯಕ್ಷ ವೆಂಕಟಾ ಚಲ, ಕಾರ್ಯಾಧ್ಯಕ್ಷ ಶಶಿಧರ ಸಿ.ಎಂ., ಜಿಲ್ಲಾ ಘಟಕದ ಹನುಮೇಶ್, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷ ಧರ್ಮೇಂದ್ರ ಪ್ರಸಾದ್ ಜೆ., ನರೇಶ್, ಗಜೇಂದ್ರ, ಸದಾಶಿವಯ್ಯ ರಿದಂತೆ ನೂರಾರು ಮಂದಿ ನೌಕರರು ಪಾಲ್ಗೊಂಡಿದ್ದರು.