ಹಾಲೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ : ಜಿಲ್ಲಾಧಿಕಾರಿಗಳಿಗೆ ಅದ್ದೂರಿ ಸ್ವಾಗತ
ಗಮನ ಸೆಳೆದ ಅಂಗನವಾಡಿ ಮಕ್ಕಳ ನೃತ್ಯ ಹಾಗೂ ಸಾಮೂಹಿಕ ಸೀಮಂತ ಕರ್ಯಕ್ರಮ ಸೂಬಾನೆ ಪದ
ತಿಪಟೂರು : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಜನಪರ ಹಾಗೂ ಪಾರದರ್ಶಕತೆಯಿಂದ ಕೂಡಿದ್ದು, ಗ್ರಾಮದ ಸಮಸ್ಯೆಗಳನ್ನು ನೇರ ವಾಗಿ ಬಗೆಹರಿಸಲು, ಮುಕ್ತವಾಗಿ ಚರ್ಚಿಸಲು ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಮಣಕಿಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಹಾಲೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ೧೧ನೇ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದಡಿ ಗ್ರಾಮದಲ್ಲಿ ಬಗೆಹರಿಯದ ಸಮಸ್ಯೆಗಳಿದ್ದಲ್ಲಿ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವುದರ ಮೂಲಕ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಜಿಲ್ಲೆಯಾದ್ಯಂತ ಜಿಲ್ಲಾಡಳಿತವು ನ್ಯಾಯಯುತ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ.
ತಮ್ಮ ಹಂತದಲ್ಲಿ ಬಗೆಹರಿಯುವಂತಹ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಗೊಳಿಸಲಾಗುವುದಲ್ಲದೇ ಸರ್ಕಾರದ ಮಟ್ಟದ್ದಾಗಿದ್ದಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದರು. ಜಿಲ್ಲೆ ಯಲ್ಲಿ ಹೊಸದಾಗಿ ಸುಮಾರು ೫೧೯ ಕಂದಾಯ ಗ್ರಾಮಗಳಿಗೆ ಹಕ್ಕುಪತ್ರ ವಿತರಣಾ ಕೆಲಸವನ್ನು ಮೂರು ತಿಂಗಳಿನಲ್ಲಿ ಮಾಡಲಾಗುವುದು. ಜಿಲ್ಲೆಯಲ್ಲಿ ರುವ ಸುಮಾರು ೨೫೦೦ ಹಳ್ಳಿಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗ್ರಾಮದ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಸಿಕೊಡಲಾ ಯಿತು. ಕಂದಾಯ ಇಲಾಖೆಯಿಂದ ವಿವಿಧ ಮಾಶಾಸನಗಳ ಆದೇಶ ಪ್ರತಿ,. ತೋಟಗಾರಿಕೆ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ತುಂತುರು ನೀರಾವರಿ ಘಟಕ ಸ್ಪಿçಂಕ್ಲರ್, ಶಿಶು ಅಭಿವೃದ್ಧಿ ಯೋಜನೆಯಡಿ ಸುಕನ್ಯ ಸಮೃದ್ದಿ ಯೋಜನೆಯ ಫಲಾನುಭವಿಗಳಿಗೆ ಪಾಸ್ಬುಕ್, ತೋಟಗಾರಿಕೆ ಇಲಾಖೆಯ ಎನ್ಹೆಚ್ಎಂ ಯೋಜನೆಯ ಫಲಾನುಭವಿಗಳಿಗೆ ಮಿನಿ ಟ್ರಾö್ಯಕ್ಟರ್, ಬೆಸ್ಕಾಂ ಇಲಾಖೆಯ ಬೆಳಕು ಯೋಜನೆಯಡಿ ಪ್ರಮಾಣಪತ್ರ, ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ ಹಾಗೂ ಲೇಬರ್ ಕಾರ್ಡ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಹಾಗೂ ಅಧಿಕಾರಿ ವರ್ಗದವರು ಹಾಲೇನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು.
ಗ್ರಾಮಪಂಚಾಯತಿ ಅಧ್ಯಕ್ಷ ಎಂ.ಡಿ. ಮಂಜುನಾಥ್, ಉಪಾಧ್ಯಕ್ಷ ಶಿವಕುಮಾರ್, ಉಪ ವಿಭಾಗಾಧಿಕಾರಿ ಕಲ್ಪಶ್ರೀ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಸುಜಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನ, ತೋಟಗಾರಿಕೆ ಉಪನಿರ್ದೇಶಕ ರಘು, ಕಾರ್ಮಿಕಾಧಿಕಾರಿ ಡಾ. ರಮೇಶ್, ರೇಷ್ಮೆ ಉಪನಿರ್ದೇಶಕ ಬಾಲಕೃಷ್ಣ, ತಹಶೀಲ್ದಾರ್ ಚಂದ್ರಶೇಖರ್, ನಗರಸಭೆ ಆಯುಕ್ತ ಉಮಾಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭುಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
***
ಗ್ರಾಮಿಣ ಭಾಗದ ಯುವಜನತೆ ಸ್ಥಳೀಯ ಸಂಪನ್ಮೂಲ ಹಾಗೂ ಸರ್ಕಾರದ ವಿವಿಧ ಯೋಜನೆಗಳ ನೆರವಿನಿಂದ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವತ್ತ ಮುಂದಾಗಬೇಕು. ರೈತಾಪಿ ವರ್ಗದವರು ಕೃಷಿ, ಹೈನುಗಾರಿಕೆಗಾಗಿ ಸರ್ಕಾರ ನೀಡುವ ಸವಲತ್ತುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದರು.
ಗ್ರಾಮದ ಮೂಲಭೂತ ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಧಿಕಾರಿ
ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಹಾಲೇನಹಳ್ಳಿ ಗ್ರಾಮದ ರಸ್ತೆ ಕಾಮಗಾರಿ, ಪಡಿತರ ನ್ಯಾಯ ಬೆಲೆ ಅಂಗಡಿ, ಗ್ರಾಮಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗೆ ಆದೇಶವನ್ನು ತ್ವರಿತವಾಗಿ ಕಾರ್ಯಪ್ರವೃತ್ತರಾಗುವುದಾಗಿ ತಿಳಿಸಿದರು.
ಒಟ್ಟು ೧೭೭ ಅರ್ಜಿ ಸ್ವೀಕೃತಿ
ಹಾಲೇನಹಳ್ಳಿ ಗ್ರಾಮದಲ್ಲಿ ಒಟ್ಟು ೧೭೭ ಅರ್ಜಿ ಸ್ವೀಕೃತಿಯಾಗಿದ್ದು, ಕಂದಾಯ ವಿಭಾಗಕ್ಕೆ ಅತೀ ಹೆಚ್ಚು ೧೧೭ ಅರ್ಜಿ, ತಾ.ಪಂ.ಗೆ ಸಂಬAಧಿಸಿದAತೆ ೩೫ ಅರ್ಜಿ, ಶಿಕ್ಷಣ ಇಲಾಖೆ ೨, ಪಿಡಬ್ಲೂö್ಯಡಿ ೨, ಸರ್ವೇ ಇಲಾಖೆ ೬, ಕೆ.ಎಸ್.ಆರ್.ಟಿ.ಸಿ. ೨, ಬೆಸ್ಕಾಂ ೨ ಅರ್ಜಿಗಳು ಸ್ವೀಕೃತಿಗೊಂಡಿವೆ. ವಿವಿಧ ಇಲಾಖೆಯ ೧೩೫ ಫಲಾನುಭವಿಗಳಿಗೆ ಆದೇಶ ಪತ್ರಗಳು, ಫಲಾನುಭವಿ ಕಿಟ್ ಹಾಗೂ ಸವಲತ್ತುಗಳನ್ನು ವಿತರಿಸಲಾಯಿತು. ಪ್ಲಾಸ್ಟಿಕ್ ಮುಕ್ತ ಹಾಗೂ ಸ್ವಚ್ಚತೆಯನ್ನು ಕಾಪಾಡ ಬೇಕು ಎಂದು ಪ್ರಮಾಣ ಮಾಡಿ ವೇದಿಕೆಯ ಮೇಲೆ ಆಧಿಕಾರಿಗಳಿಗೆ ಕುಡಿಯಲು ಪ್ಲಾಸ್ಟಿಕ್ ಬಾಟಲ್ ವ್ಯವಸ್ಥೆ ಮಾಡಿದ್ದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಯಿತು.